ಹೊಸಕೋಟೆ: ಹೊಸಕೋಟೆ ಕ್ಷೇತ್ರದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಅವರಿಗೆ ಟಿಕೆಟ್ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ.

ಅನರ್ಹ ಶಾಸಕ ಎಂ.ಟಿ.ಬಿ.ನಾಗರಾಜ್ ಅವರಿಗೆ ಟಿಕೆಟ್ ನೀಡಲು ಈಗಾಗಲೇ ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಅವರು ತಮ್ಮನ್ನು ಭೇಟಿ ಮಾಡಿದ ಹೊಸಕೋಟೆ ಕಾರ್ಯಕರ್ತರಿಗೆ ತಿಳಿಸಿದರು.

ಮಂಗಳವಾರ ನೂರಾರು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಶರತ್ ಬಚ್ಚೇಗೌಡರನ್ನೇ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಕೋರಿದರು.

ಶರತ್ ಬಚ್ಚೇಗೌಡ ಪ್ರತಿಕ್ರಿಯೆ: ‘ಎಂಟಿಬಿ ನಾಗರಾಜ್ ಅವರಿಗೆ ಕೊಟ್ಟ ಮಾತಿನಂತೆ ಪಕ್ಷದಿಂದ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಪಕ್ಷ ಸಂಘಟನೆಗಾಗಿ ದುಡಿದ ನಾನು ಕೊನೇ ಕ್ಷಣದವರೆಗೂ ಹೋರಾಡುತ್ತೇನೆ. ಹಾಗೆಂದು ಕಾಂಗ್ರೆಸ್ ಸೇರುವ ಪ್ರಸ್ತಾವ ಇಲ್ಲ’ ಎಂದು ಶರತ್ ಹೇಳಿದರು.

ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲು ಶರತ್ ಇದೇ 27 ರಂದು ಕಾರ್ಯಕರ್ತರ ಸಭೆ ಕರೆದಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.