ಬೆಂಗಳೂರು: 'ನಗರದ ಪ್ರಮುಖ ಹೋಟೆಲ್ಗಳ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಸಾರ್ವಜನಿಕರು ಈ ಸ್ಥಳಗಳಿಂದ ದೂರವಿರಿ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘವು ಸೈಬರ್ ಕ್ರೈಂಗೆ ಶುಕ್ರವಾರ ದೂರು ನೀಡಿದೆ.

ಪಟ್ಟಿಯಲ್ಲಿ ನಗರದ ಪ್ರತಿಷ್ಠಿತ ಹೋಟೆಲ್ಗಳು, ಬೇಕರಿ, ಉದ್ಯಾನಗಳ ಹೆಸರನ್ನು ಹಾಕಲಾಗಿದ್ದು, ಈ ಭಾಗಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದಾಗಿ ಸುಳ್ಳು ಸಂದೇಶವೊಂದು ಕಳೆದೆರಡು ದಿನಗಳಿಂದ ಹರಿದಾಡುತ್ತಿದೆ. ಇದರಿಂದಾಗಿ, ಗ್ರಾಹಕರು ಹಾಗೂ ಹೋಟೆಲ್ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಸುದ್ದಿ ಸುಳ್ಳು ಎಂದು ಹೋಟೆಲ್ಗಳ ಮಾಲೀಕರು 'ಪ್ರಜಾವಾಣಿ'ಗೆ ಸ್ಪಷ್ಟಪಡಿಸಿದರು.

'ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಸುಳ್ಳುಸುದ್ದಿ ಹಬ್ಬಿಸಿದ್ದಾರೆ. ಯಾವುದೇ ಹೋಟೆಲ್ ಸಿಬ್ಬಂದಿಗೆ ಕೊರೊನಾ ಸೋಂಕು ಹರಡಿಲ್ಲ. ಎಲ್ಲ ಹೋಟೆಲ್ಗಳಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದರು.

'ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.