ಬೆಂಗಳೂರು: ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವಾಗ ಮಾಲೀಕರು ಎಚ್ಚರವಹಿಸಬೇಕು. ಸಿ ಫಾರ್ಮ್ ಭರ್ತಿ ಮಾಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಶನಿವಾರ ಹೇಳಿದರು.

ಕಸ್ತೂರಿನಗರದ ನ್ಯೂ ಹೊರೈಜನ್ ಕಾಲೇಜಿನಲ್ಲಿ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಅವರು, ’ವಿದೇಶಿ ಪ್ರಜೆಗಳು ನಗರದಲ್ಲಿ ಮಾದಕವಸ್ತು ಮಾರಾಟ, ಸಾಗಣೆ ಸೇರಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ಮನೆಯ ಮಾಲೀಕರು ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ನೀಡುವಾಗ ಅವರ, ಪಾಸ್ಪೋರ್ಟ್ ನಕಲು ಪ್ರತಿ, ಗುರುತಿನ ಚೀಟಿ, ಸಂಪರ್ಕ ಸಂಖ್ಯೆ ಸೇರಿ ಕೆಲ ಮಾಹಿತಿ ಸಂಗ್ರಹಿಸಿ ಸ್ಥಳೀಯ ಪೊಲೀಸರಿಗೆ ನೀಡಬೇಕು ಎಂದು ಹೇಳಿದರು.

ಹೋಟೆಲ್, ಪಿ.ಜಿ ಮಾಲೀಕರಿಗೂ ವಿದೇಶಿ ಪ್ರಜೆಗಳಿಗೆ ಮನೆ, ರೂಮ್ ಬಾಡಿಗೆಗೆ ನೀಡುವಾಗ ಸಿ ಫಾರ್ಮ್ ಭರ್ತಿ ಮಾಡಿ ಸಲ್ಲಿಸಲು ಸೂಚಿಸಲಾಗಿದೆ. ಇದನ್ನು ಪಾಲಿಸದವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇಂದಿರಾನಗರ, ದೊಮ್ಮಲೂರು, ಕಮ್ಮನಹಳ್ಳಿ, ಕಸ್ತೂರಿನಗರ, ಬೈಯಪ್ಪನಹಳ್ಳಿ ಸೇರಿದಂತೆ ಪೂರ್ವ ವಿಭಾಗದ ಸಾರ್ವಜನಿಕರು, ತಮ್ಮ ಪ್ರದೇಶಗಳಲ್ಲಿ ಸಂಚಾರ ಸಮಸ್ಯೆ, ಸಿ.ಸಿ.ಟಿ.ವಿ ಕ್ಯಾಮೆರಾಗಳ ಅಳವಡಿಕೆ ಬಗ್ಗೆ ನಗರ ಪೊಲೀಸ್ ಕಮಿಷನರ್ ಅವರ ಗಮನ ಸೆಳೆದರು. ಈ ಸಂಬಂಧ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುವುದಾಗಿ ಕಮಿಷನರ್ ಭರವಸೆ ನೀಡಿದರು.

ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್, ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.