ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂದ್ರಹಳ್ಳಿಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಾ(25) ಆತ್ಮಹತ್ಯೆ ಮಾಡಿಕೊಂಡವರು.

‘ಮಾನಸಾ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೊ ಮಾಡಿದ್ದರು. ಅದನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಆರು ವರ್ಷದ ಹಿಂದೆ ದಿಲೀಪ್ ಅವರೊಂದಿಗೆ ಮಾನಸಾ ಅವರ ವಿವಾಹವಾಗಿತ್ತು. ದಂಪತಿಗೆ ಐದು ವರ್ಷದ ಹೆಣ್ಣು ಮಗುವಿದೆ. ಒಂದೂವರೆ ವರ್ಷದಿಂದ ದಿಲೀಪ್ಗೆ ಬೇರೊಂದು ಮಹಿಳೆಯೊಂದಿಗೆ ಸ್ನೇಹವಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇದರಿಂದ ಬೇಸತ್ತು ಮಾನಸಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.