ಬೆಂಗಳೂರು: ನೈರುತ್ಯ ರೈಲ್ವೆ ಆದಾಯದಲ್ಲಿ ಭಾರಿ ಹೆಚ್ಚಳವಾಗಿದೆ. ಈ ವರ್ಷ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ₹ 4,288 ಕೋಟಿ ಆದಾಯ ಬಂದಿದೆ. ಕಳೆದ ವರ್ಷದ ಇದೇ ಅವಧಿಯ ಆದಾಯಕ್ಕೆ ಹೋಲಿಸಿದರೆ ಶೇ 10.44ರಷ್ಟು ಅಧಿಕವಾಗಿದೆ. ಆದಾಯದಲ್ಲಿ ಇದು ಅತ್ಯುತ್ತಮ ಬೆಳವಣಿಗೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಪ್ರಯಾಣಿಕರ ಟಿಕೆಟ್‌ನಿಂದ ಬಂದ ಆದಾಯ ₹ 1,801 ಕೋಟಿ ಆಗಿದ್ದು, ಕಳೆದ ವರ್ಷದ ಈ ಅವಧಿಗಿಂತ ಶೇ 15.20 ರಷ್ಟು ಹೆಚ್ಚಳವಾಗಿದೆ. ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ 27.49 ದಶಲಕ್ಷ ಟನ್ ಸರಕುಗಳನ್ನು ಸಾಗಿಸುವ ಮೂಲಕ ₹ 2,741 ಕೋಟಿ ಆದಾಯ ಗಳಿಸಿದೆ. ಸರಕು ಸಾಗಾಟದಲ್ಲಿ ಶೇ 11.66ರಷ್ಟು ಅಧಿಕ ಆದಾಯ ಬಂದಿದೆ.

ವಿಭಾಗಗಳ ವ್ಯವಹಾರ ಅಭಿವೃದ್ಧಿ ಘಟಕಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅವಿರತ ಪ್ರಯತ್ನ, ಸಮರ್ಪಕ ನಿರ್ವಹಣೆಯಿಂದ ಈ ಸಾಧನೆ ಸಾಧ್ಯವಾಗಿದೆ. ನೈಋತ್ಯ ರೈಲ್ವೆ ಮಾರ್ಗಗಳ ದ್ವಿಪಥಿಕರಣ ಹಾಗೂ ವಿದ್ಯುದ್ದೀಕರಣವು ಸರಕು ರೈಲುಗಳ ಸಾಗಣೆ ಸಮಯವನ್ನು ಕಡಿಮೆ ಮಾಡಿದೆ ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.