ಬೆಂಗಳೂರು: ‘ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವದಂತಿ ಹಬ್ಬಿದೆ. ಅದನ್ನು ನಂಬಬೇಡಿ’ ಎಂದುರಿಯಲ್ ಎಸ್ಟೇಟ್ ಉದ್ಯಮಿ ಆರ್. ಪ್ರಭಾಕರ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

‘ಸಾಯಿ ಡೆವಲಪರ್ಸ್ನ ಮಾಲೀಕರೂ ಆಗಿರುವ ಪ್ರಭಾಕರ ರೆಡ್ಡಿ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಗೆ ಮುಂದಾಗಿದ್ದರು’ ಎಂಬ ಸುದ್ದಿ ಹರಿದಾಡಿತ್ತು.

ಈ ಸಂಬಂಧ ಆಸ್ಪತ್ರೆಯಿಂದಲೇ ವಿಡಿಯೊ ಮೂಲಕ ಪ್ರತಿಕ್ರಿಯಿಸಿರುವಪ್ರಭಾಕರ ರೆಡ್ಡಿ, ‘ನನಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಮೊನ್ನೆ ನಡೆದ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಶ್ವಾಸಕೋಶ ಮತ್ತು ಗಂಟಲಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯ ವಾರ್ಡ್ನಲ್ಲೇ ಇದ್ದು, ಯಾವುದೇ ಸಮಸ್ಯೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ವರ್ಷದ ಹಿಂದೆ ಆದಾಯ ತೆರಿಗೆ ವಂಚನೆ ಆರೋಪದಡಿ ಐಟಿ ಅಧಿಕಾರಿಗಳು ಪ್ರಭಾಕರ ರೆಡ್ಡಿ ಮನೆಯ ಮೇಲೆ ದಾಳಿ ನಡೆಸಿದ್ದರು.ಭೂ ಕಬಳಿಕೆ, ವಂಚನೆ ಹಾಗೂ ಜೀವ ಬೆದರಿಕೆ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.