ಬೆಂಗಳೂರು: ‘ಮೂರು ವರ್ಷಕ್ಕೂ ಹೆಚ್ಚು ಅವಧಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ್ಯೆಯಾಗಿ ಉತ್ತಮ ಕೆಲಸ ಮಾಡಿದ್ದೇನೆ’ ಎಂದು ಪ್ರಮಿಳಾ ನಾಯ್ಡು ಹೇಳಿದರು.

ಅಧಿಕಾರ ಅವಧಿ ಪೂರ್ಣಗೊಂಡ ಹಿನ್ನೆಲೆ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2020ರಿಂದ ಇದುವರೆಗೂ 7,329 ದೂರುಗಳು ದಾಖಲಾಗಿದ್ದು, ಇದರಲ್ಲಿ 4,399 ದೂರುಗಳು ಇತ್ಯರ್ಥವಾಗಿವೆ. 2,932 ದೂರುಗಳು ತನಿಖಾ ಹಂತದಲ್ಲಿವೆ. ಈ ಅವಧಿಯಲ್ಲಿ 1,054 ಸೊಮೋಟೊ ದೂರುಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ’ ಎಂದರು.

‘ಬೆಂಗಳೂರಿನಲ್ಲಿ ಯುವತಿಯ ಮೇಲಾದ ಆ್ಯಸಿಡ್ ದಾಳಿ ಹಾಗೂ ಮೈಸೂರಿನಲ್ಲಿ ನಡೆದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಆಯೋಗ ನಿಂತುಕೊಂಡು ಆತ್ಮಸ್ಥೈರ್ಯ ತುಂಬುವುದರ ಜತೆಗೆ ಜೀವನ ಕಟ್ಟಿಕೊಳ್ಳುವಲ್ಲಿ ನೆರವಾಗಿದೆ. ಜತೆಗೆ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಆ್ಯಸಿಡ್ ದಾಳಿಗೆ ಒಳಗಾದ ಯುವತಿಯರಿಗೆ ₹10 ಸಾವಿರ ಧನಸಹಾಯ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ’ ಎಂದರು.

‘ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಹಿಳಾ ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸಲಾಗಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳ ಬಗ್ಗೆಯೂ ಪರಿಶೀಲಿಸಿ ಕ್ರಮಕೈಗೊಳ್ಳಲಾಗಿದೆ. ನಿವೃತ್ತಿ ಪಡೆದ ನಂತರವೂ ಹೆಣ್ಣು ಮಕ್ಕಳ ರಕ್ಷಣೆಗೆ ವೈಯಕ್ತಿಕವಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.