ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ವಲಯಗಳನ್ನು ತ್ವರಿತವಾಗಿ ಗುರುತಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಹಾಗೂ ಮಾರಾಟ ವಲಯಗಳನ್ನು ಗುರುತಿಸುವ ಸಂಬಂಧ ಸೋಮವಾರ ನಡೆದ ವರ್ಚ್ಯುವಲ್ ಸಭೆಯಲ್ಲಿ ಅವರು ಮಾತನಾಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆಗಾಗಿ ಈಗಾಗಲೇ ಪ್ರಮಾಣಿತ ಕಾರ್ಯಾಚರಣೆಯ ವಿಧಾನ (ಎಸ್ಒಪಿ) ಬಿಡುಗಡೆಗೊಳಿಸಿದ್ದು, ಅದರ ಅನುಸಾರ ವ್ಯಾಪಾರ ವಲಯಗಳನ್ನು ಗುರುತಿಸಬೇಕು ಎಂದು ಹೇಳಿದರು.

ನಿಖರವಾದ ಮಾಹಿತಿಗಾಗಿ ಬೀದಿ ವ್ಯಾಪಾರಿಗಳ ಸಮಿಕ್ಷೆಯಾಗಬೇಕಿದೆ. ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ನಿಗದಿತ ಸಮಯದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮಾತನಾಡಿ, ‘ಆಯಾ ವಲಯದ ಜನಸಂಖ್ಯೆಗೆ ಅನುಗುಣವಾಗಿ ಶೇಕಡ 2.5ರಷ್ಟು ಮಾರಾಟ ವಲಯ ಗುರುತಿಸಬೇಕು. ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಲು ವೆಬ್ ಅಪ್ಲಿಕೇಷನ್ ಹಾಗೂ ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಬೀದಿ ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿ ತಂತ್ರಾಂಶ ಬಳಸಿಕೊಂಡು ಜಿಯೋ ಟ್ಯಾಗಿಂಗ್ ಮೂಲಕ ಸಮೀಕ್ಷೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಆಯಾ ವಲಯಗಳಲ್ಲಿ ಸಮೀಕ್ಷೆ ನಡೆದ ನಂತರ ಪೂರ್ಣ ವಿವರ ಇರುವ ಪಟ್ಟಿಯನ್ನು ಪಟ್ಟಣ ಮಾರಾಟ ಸಮಿತಿಯ ಮುಂದಿರಿಸಲಾಗುವುದು. ಆಕ್ಷೇಪಣೆ ಸ್ವೀಕರಿಸಲು ಕಾಲಾವಕಾಶ ನೀಡಿ ಪಾಲಿಕೆಯ ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.