ಹೆಸರಘಟ್ಟ: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ (ಐಐಎಚ್ಆರ್) ಮಾ. 5ರಿಂದ 7ರವರೆಗೆ ‘ರಾಷ್ಟ್ರೀಯ ತೋಟಗಾರಿಕೆ ಮೇಳ–2024’ ಆಯೋಜಿಸಲಾಗಿದೆ ಎಂದು ಭಾರತೀಯ ತೋಟಗಾರಿಕಾ ಉಪಮಹಾನಿರ್ದೇಶಕ ಸಂಜಯ್ ಕುಮಾರ್ ಸಿಂಗ್ ಮಾಹಿತಿ ನೀಡಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ‘ಸುಸ್ಥಿರ ಅಭಿವೃದ್ಧಿಗಾಗಿ ನವೀನ ಪೀಳಿಗೆಯ ತೋಟಗಾರಿಕೆ ತಂತ್ರಜ್ಞಾನಗಳು’ ಎಂಬ ಶೀರ್ಷಿಕೆ ಅಡಿಯಲ್ಲಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮೇಳದ ಸಂಘಟನಾ ಕಾರ್ಯದರ್ಶಿ ಧನಂಜಯ ಎಂ. ವಿ, ‘ಇತ್ತೀಚಿನ ಆಧುನಿಕ ತಂತ್ರಜ್ಞಾನಗಳಾದ ಚತುರ ನೀರಾವರಿ ವ್ಯವಸ್ಥೆ, ನಿಯಂತ್ರಿತ ಪರಿಸರ ಕೃಷಿ, ಲಂಬ ಕೃಷಿ, ಸುಸ್ಥಿರ ಅಭಿವೃದ್ಧಿಗಾಗಿ ಪರಿಸರ ಸ್ನೇಹಿ ಪದ್ಧತಿಗಳು ಸೇರಿದಂತೆ ಮೇಳದಲ್ಲಿ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಜೊತೆಗೆ, ನಗರ ತೋಟಗಾರಿಕೆ, ಮಣ್ಣು ರಹಿತ ಕೃಷಿ, ತೋಟಗಾರಿಕೆ ಬೆಳೆಗಳ ಮೌಲ್ಯವರ್ಧನೆ ಹಾಗೂ ಪ್ಯಾಕೇಜ್ ಮತ್ತು ಸಂಗ್ರಹಣ ತಂತ್ರಜ್ಞಾನಗಳ ಕುರಿತು ಕಾರ್ಯಗಾರಗಳನ್ನು ಸಹ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

ಮೇಳದ ಪ್ರಚಾರ ಸಮಿತಿ ಅಧ್ಯಕ್ಷ ಪಿ. ನಂದೀಶ್, ‘ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳಲ್ಲಿ ತೋಟಗಾರಿಕೆಗೆ ಸಂಬಂಧಿಸಿದ ನೂತನ ಆವಿಷ್ಕಾರಗಳು ಮತ್ತು ತಂತ್ರಜ್ಞಾನಗಳ ಪ್ರದರ್ಶನ ಇದೆ. ಬೀಜಗಳು, ಗಿಡಗಳು, ಸಸ್ಯೋತ್ಪಾದನೆ ಮತ್ತು ಕೃಷಿ–ತೋಟಗಾರಿಕೆ ಉಪಕರಣಗಳ ಮಾರಾಟವೂ ಇರಲಿದೆ’ ಎಂದರು.

‘ಮೂರು ದಿನಗಳ ಈ ಮೇಳದಲ್ಲಿ ಸುಮಾರ 50 ಸಾವಿರಕ್ಕೂ ಹೆಚ್ಚು ರೈತರು ಮತ್ತು ತೋಟಗಾರಿಕೆಯಲ್ಲಿ ಆಸಕ್ತಿಯುಳ್ಳವರು ಪಾಲ್ಗೊಳ್ಳುವ ಸಾಧ್ಯತೆ ಇದೆ’ ಎಂದು ಹೇಳಿದರು. ಮೇಳದ ಕುರಿತ ಹೆಚ್ಚಿನ ಮಾಹಿತಿಗೆ 91083 64672/9403891704 ಸಂಪರ್ಕಿಸಬಹುದು.

ಬೀಜ ಉತ್ಪಾದನಾ ಘಟಕಕ್ಕೆ ಚಾಲನೆ

ಎಚ್ಎಎಲ್ ಸಂಸ್ಥೆಯ ಅನುದಾನದಲ್ಲಿ ₹2.53 ಕೋಟಿ ವೆಚ್ಚದಲ್ಲಿ ಬೀಜ ಉತ್ಪಾದನಾ ಘಟಕವನ್ನು ಪ್ರಾರಂಭಿಸ ಲಾಗಿದೆ. ಈ ಘಟಕದಲ್ಲಿ ಟೊಳ್ಳು ಗಟ್ಟಿ ಮತ್ತು ಬಣ್ಣದ ಆಧಾರದಲ್ಲಿ ಬೀಜಗಳನ್ನು ಪ್ರತ್ಯೇಕಿಸುವ ವಿಶೇಷ ಯಂತ್ರವನ್ನು ಅಳವಡಿಸಲಾಗಿದೆ ಎಂದು ಪಿ. ನಂದೀಶ್ ಮಾಹಿತಿ ನೀಡಿದರು. ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಜೇನು ತುಪ್ಪದ ಪರೀಕ್ಷಾ ಪ್ರಯೋಗಾಲಯವನ್ನು ಪ್ರಾರಂಭಿಸಲಾಗಿದೆ. 18 ರೀತಿಯಲ್ಲಿ ಜೇನು ತುಪ್ಪವನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಇದರಿಂದ ತುಪ್ಪದ ಗುಣಮಟ್ಟವನ್ನು ಗುರುತಿಸಲು ಸಹಯಕವಾಗುತ್ತದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.