ಬೆಂಗಳೂರು: ಐಎಂಎ ಸಮೂಹ ಕಂಪನಿಯ ಮಾಲೀಕ, ಷೇರುದಾರರಿಗೆ ಕೋಟ್ಯಂತರ ಹಣ ವಂಚಿಸಿದ ಪ್ರಕರಣದಲ್ಲಿ, ಈ ಹಿಂದೆ ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದ ಇಬ್ಬರು ಆರೋಪಿಗಳ ವಿರುದ್ಧ ಸಿಬಿಐ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಆರೋಪಿಗಳಾದ ಮೊಹ್ಮದ್ ಹನೀಫ್ ಅಫ್ಸರ್ ಅಜೀಜ್ ಮತ್ತು ಖಲೀಲ್ ಉಲ್ಲಾ ಜಮಾಲ್ ವಿರುದ್ಧ ಇದೇ ಶನಿವಾರ (ಅ. 5) ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಿವಾಜಿನಗರದ ಒಪಿಎಚ್ ರಸ್ತೆಯಲ್ಲಿರುವ ಬೇಪಾರಿಯನ್ ಮಸೀದಿಯ ಮೌಲ್ವಿ (ಧರ್ಮಗುರು) ಹನೀಫ್, ಐಎಂಎ ಬಗ್ಗೆ ಪ್ರಚಾರ ಮಾಡುತ್ತಿದ್ದ. ಆ ಮೂಲಕ, ಕಂಪನಿಯಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿದ್ದ. ಮೌಲ್ವಿ ಅವರನ್ನು ಖುಷಿಪಡಿಸುವುದಕ್ಕಾಗಿ ಮನ್ಸೂರ್ ಖಾನ್, ₹ 3 ಕೋಟಿ ಮೌಲ್ಯದ ಮನೆಯನ್ನು ಉಡುಗೊರೆಯಾಗಿ ಕೊಟ್ಟಿದ್ದ. ಈ ಆಸ್ತಿಯನ್ನು ಕೆಪಿಐಡಿ ಕಾಯ್ದೆ– 2004 ಅಡಿ ಸಕ್ಷಮ ಪ್ರಾಧಿಕಾರ ಈಗಾಗಲೇ ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೆ, ತನ್ನ ಕೆಲಸಕ್ಕೆ ಮೌಲ್ವಿ ಹಣವನ್ನೂ ಪಡೆಯುತ್ತಿದ್ದ.

ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಖಲೀಲ್ ಉಲ್ಲಾ ಜಮಾಲ್, ಐಎಂಎ ಕಂಪನಿಯಿಂದ ವಸೂಲಿ ಮಾಡಿದ ಹಣದಲ್ಲಿ ಪತ್ನಿ ಹೆಸರಿಗೆ ಆಸ್ತಿ ಖರೀದಿಸಿದ ಆರೋಪ ಎದುರಿಸುತ್ತಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಐಎಂಎ ಪ್ರಕರಣದಲ್ಲಿ ಈ ಇಬ್ಬರ ಪಾತ್ರದ ಬಗ್ಗೆ ತನಿಖೆ ಪೂರ್ಣಗೊಳಿಸಿದ ಬಳಿಕ, ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.