ಬೆಂಗಳೂರು: ‘ಕಲ್ಲುಗಣಿಗಾರಿಕೆಯ ರಾಜಧನ ಪಾವತಿ ವ್ಯವಸ್ಥೆಯನ್ನು ಅಧಿವೇಶನದ ನಂತರ ಸುಧಾರಿಸಬೇಕು‘ ಎಂದು ಸರ್ಕಾರವನ್ನು ಆಗ್ರಹಿಸಿರುವ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್, ಇಲ್ಲದಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸುವುದಾಗಿ’ ಎಚ್ಚರಿಕೆ ನೀಡಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಶೆಟ್ಟಿ, ‘ಕಟ್ಟಡ ಕಲ್ಲು ಗಣಿಗಾರಿಕೆ ನೀತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಕಲ್ಲುಗಣಿಗಾರಿಕೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದರು.

‘ರಾಜಧನ ಪಾವತಿಯಲ್ಲಿ ದ್ವಿಮುಖ ನೀತಿ ಅನುಸರಿಸಲಾಗುತ್ತಿದೆ. ಕಟ್ಟಡ ಕಲ್ಲು ಗುತ್ತಿಗೆದಾರರು ಸರ್ಕಾರಕ್ಕೆ ರಾಜಧನ ಪಾವತಿಸಬೇಕು. ಸರ್ಕಾರಿ, ಖಾಸಗಿ ಕಾಮಗಾರಿಗಳನ್ನು ನಿರ್ವಹಿಸುವ ಗುತ್ತಿಗೆದಾರರು ಸಹ ಕಟ್ಟಡ ಕಲ್ಲು ಸಾಮಾಗ್ರಿಗಳನ್ನು ರವಾನಿಸಿಲು ರಾಜಧನ ಪಾವತಿಸಿ ಪರವಾನಗಿ ಪಡೆದುಕೊಂಡು ಕಾಮಗಾರಿಗಳನ್ನು ಮಾಡಬೇಕೆಂಬ ನಿಯಮವಿದ್ದು, ಅದನ್ನು ಬದಲಾವಣೆ ಮಾಡಬೇಕು’ ಎಂದು ಒತ್ತಾಯಿಸಿದರು.

ಅಸೋಸಿಯೇಷನ್ ಉಪಾಧ್ಯಕ್ಷ ಕಿರಣ್ ಜೈನ್ ಬಿ. ಆರ್., ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.