ಬೆಂಗಳೂರು: ಪಾದರಾಯನಪುರ ವಾರ್ಡ್ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಮತ್ತು ಅವರ 22 ಮಂದಿ ಬೆಂಬಲಿಗರನ್ನು ನ್ಯಾಯಾಲಯ ಮೂರು ದಿನಗಳ ಅವಧಿಗೆ ಜೆ.ಜೆ. ನಗರ ಪೊಲೀಸರ ವಶಕ್ಕೆ ನೀಡಿದೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ಇಮ್ರಾನ್ ಪಾಷಾ ಮತ್ತು ಇತರ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿ, ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

ತಮ್ಮ ವಶಕ್ಕೆ ನೀಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಮ್ರಾನ್ ಪಾಷಾಗೆ ಈ ಹಿಂದೆಯೇ ಕೊರೊನಾ ತಪಾಸಣಾ ವರದಿ ಬಂದಿದ್ದು, ಪೊಲೀಸ್ ವಶದಲ್ಲಿರುವ ಅವರ ಬೆಂಬಲಿಗರ ಗಂಟಲು ದ್ರವ ಸಂಗ್ರಹಿಸಲಾಗಿದೆ. ಎರಡು ದಿನಗಳಲ್ಲಿ ಆ ವರದಿ ಬರಲಿದೆ. ವರದಿಯಲ್ಲಿ ಕೊರೊನಾ ದೃಢಪಟ್ಟರೆ ಅಂಥವರನ್ನು ಆಸ್ಪತ್ರೆಗೆ ದಾಖಲಿಸಲಾಗುವುದು. ಇಲ್ಲದಿದ್ದರೆ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದರು.

ಪಾಷಾ, ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಭಾನುವಾರ ಬೆಂಬಲಿಗರ ಜೊತೆ ಮೆರವಣಿಗೆಯಲ್ಲಿ ತೆರಳಿದ್ದರು. ನಿಯಮ ಉಲ್ಲಂಘಿಸಿದ ಮತ್ತು ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಮೆರವಣಿಗೆ ನಡೆಸುವ ಮೂಲಕ ಸಾಂಕ್ರಾಮಿಕ ರೋಗ ಹರಡಲು ಯತ್ನಿಸಿದ ಆರೋಪದಡಿ ಪಾಷಾ ಹಾಗೂ ಅವರ ಬೆಂಬಲಿಗರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.