ಬೆಂಗಳೂರು: ಡಾ. ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಸಾಹಿತಿ ದೊಡ್ಡರಂಗೇಗೌಡ ಸೇರಿ ಏಳು ಮಂದಿ ಆಯ್ಕೆಯಾಗಿದ್ದಾರೆ.

ಪರಿಸರವಾದಿ ಅ.ನ. ಯಲ್ಲಪ್ಪರೆಡ್ಡಿ, ಸಂಸ್ಕೃತಿ ಚಿಂತಕ ಮಲ್ಲೇಪುರಂ ಜಿ. ವೆಂಕಟೇಶ್, ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ, ರಂಗಕರ್ಮಿ ಸಿ. ಬಸವಲಿಂಗಯ್ಯ, ಸುಗಮ ಸಂಗೀತ ವಿದ್ವಾಂಸರಾದ ಜಯಶ್ರೀ ಅರವಿಂದ್ ಹಾಗೂ ಮುಂಬೈನ ಹೊರನಾಡು ಸಾಂಸ್ಕೃತಿಕ ಸಂಘಟನೆಯ ಆರ್.ಕೆ. ಶೆಟ್ಟಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನವೆಂಬರ್ 8ರಂದು ಸಂಜೆ 5 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಹಿತಿ ಹಂ.ಪ. ನಾಗರಾಜಯ್ಯ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ವೇಮಗಲ್ ನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.