ಬೆಂಗಳೂರು: ‘ಸತತ ರಾಸಾಯನಿಕ ಬಳಕೆಯಿಂದ ಕೃಷಿ ಭೂಮಿಯ ಫಲವತ್ತತೆ ಕಡಿಮೆಯಾಗುತ್ತಿದ್ದು, ಕಲುಷಿತ ಆಹಾರ ಉತ್ಪಾದನೆ ಹೆಚ್ಚಾಗುತ್ತಿದೆ’ ಎಂದು ಕೃಷಿ ಸಚಿವ ಚಲುವನಾರಾಯಣಸ್ವಾಮಿ ಹೇಳಿದರು.

ನಗರದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ಆರ್ಟ್ ಆಫ್ ಲಿವಿಂಗ್ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರದಿಂದ ಪ್ರಾರಂಭವಾದ ಮೂರು ದಿನಗಳ ‘ಜಾಗತಿಕ ಸಿರಿಧಾನ್ಯ, ಸಾವಯವ ಮತ್ತು ನೈಸರ್ಗಿಕ ಕೃಷಿ ಉತ್ಪನ್ನಗಳ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಉತ್ತಮ ಆರೋಗ್ಯ ಬೇಕಾದರೆ, ಸಿರಿಧಾನ್ಯ ಮತ್ತು ಸಾಯವಯ ಕೃಷಿಯಲ್ಲಿ ಬೆಳೆದ ಆಹಾರ ಉತ್ಪನ್ನಗಳನ್ನು ಹೆಚ್ಚಾಗಿ ಸೇವಿಸಬೇಕು. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಕಾಳಜಿ ಹೆಚ್ಚಾಗುತ್ತಿದ್ದು, ರಾಸಾಯನಿಕ ಮುಕ್ತ ಆಹಾರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಸಿರಿಧಾನ್ಯಗಳ ಸೇವನೆ ಹೆಚ್ಚಾಗಿದೆ. ಇದರಿಂದ, ರೈತರು ಹೆಚ್ಚು ಲಾಭಗಳಿಸುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಹಾಯಕವಾಗಿದೆ’ ಎಂದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಜಿಕೆವಿಕೆನ ಸಾವಯವ ಕೃಷಿ ಸಂಶೋಧನಾ ವಿಭಾಗದ ಮುಖ್ಯಸ್ಥ ಬಿ. ಬೋರಯ್ಯ, ಅಖಿಲ ಭಾರತೀಯ ಸುಸಂಘಟಿ ಸಂಶೋಧನಾ ಪ್ರಾಯೋಜನದ ಮುಖ್ಯಸ್ಥ ನಾಗರಾಜ ಟಿ. ಈ., ಶ್ರೀ ಶ್ರೀ ನೈಸರ್ಗಿಕ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಂಗನಾಥ್ ಪ್ರಸಾದ್, ಸಿರಿಧಾನ್ಯ ಮತ್ತು ತೈಲ ಬೀಜ ಪರಿಣಿತ ಉದಯ ಕುಮಾರ್ ಕೊಳ್ಳಿಮಠ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.