ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ‘ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನ’ಕ್ಕೆ ಭಾನುವಾರ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದು, ₹ 39.50 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ.

ಲಾಲ್‌ಬಾಗ್‌ನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿತ್ತು. ಲಾಲ್‌ಬಾಗ್ ಮುಖ್ಯ ಗೇಟಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೀದಿ ವ್ಯಾಪಾರಿಗಳ ಹಾವಳಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.

ಲಾಲ್‌ಬಾಗ್ ಮೆಟ್ರೊ ನಿಲ್ದಾಣದಲ್ಲಿ ಟಿಕೆಟ್ ಖರೀದಿಗೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದರು. ಬಿಎಂಟಿಸಿ ಬಸ್‌ಗಳೆಲ್ಲ ತುಂಬಿತುಳಕುತ್ತಿದ್ದವು. ಶಾಂತಿನಗರ ಬಸ್ ನಿಲ್ದಾಣದಿಂದ ಲಾಲ್‌ಬಾಗ್‌ನ ಗೇಟಿನವರೆಗೆ, ಉದ್ಯಾನದ ವೆಸ್ಟ್‌ಗೇಟ್‌ನ ಪಾದಚಾರಿ ಮಾರ್ಗಗಳೆಲ್ಲಿ ಕಿರು ಮಾರುಕಟ್ಟೆಗಳು ಸೃಷ್ಟಿಯಾಗಿದ್ದವು.

ಲಾಲ್‌ಬಾಗ್‌ನ ನಾಲ್ಕು ಗೇಟ್‌ಗಳಲ್ಲಿ ಜನಸಂದಣಿ ಹೆಚ್ಚಿದ್ದ ಕಾರಣ ಟಿಕೆಟ್ ನೀಡಲು ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದರು.

ಗಾಜಿನ ಮನೆಯಲ್ಲಿ ಪುಷ್ಪಗಳಲ್ಲಿ ಅರಳಿದ ಸಂಸತ್ತು ಮತ್ತು ಅಂಬೇಡ್ಕರ್ ಅವರ ಜೀವನದ ಘಟನೆಗಳನ್ನು ನೋಡಲು ಬಂದಿದ್ದ ಜನ ಸರತಿ ಸಾಲಿನಲ್ಲಿ ನಿಂತಿದ್ದರು. ಪೊಲೀಸರು ಮತ್ತು ತೋಟಗಾರಿಕೆ ಇಲಾಖೆ ಸಿಬ್ಬಂದಿ ಕಿಕ್ಕಿರಿದು ಸೇರಿದ್ದ ಜನರನ್ನು ನಿಯಂತ್ರಿಸಲು ಹರಸಾಹಸಪಟ್ಟರು.

‘ಇದುವರೆಗೂ ಒಟ್ಟು 8.41ಲಕ್ಷ ಜನ ಫಲಪುಷ್ಪ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಒಟ್ಟು ₹2.85 ಕೋಟಿ ಸಂಗ್ರಹವಾಗಿದೆ’ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.