ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಲ್ಲೂ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂಗಳನ್ನು ಕಡೆಗಣಿಸಿದ್ದಾರೆ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ವಿಧಾನಸಭೆಯಲ್ಲಿ ಗುರುವಾರ ಟೀಕಿಸಿದರು.

ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ವಕ್ಫ್ ಮಂಡಳಿಗೆ ₹ 100 ಕೋಟಿ ಅನುದಾನ ಘೋಷಿಸಿರುವ ಮುಖ್ಯಮಂತ್ರಿ, ಹಿಂದೂ ರುದ್ರಭೂಮಿಗಳ ಅಭಿವೃದ್ಧಿಗೆ ಕೇವಲ ₹ 10 ಕೋಟಿ ಒದಗಿಸಿದೆ. ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಗೆ ಅನುದಾನ ಹಂಚಿಕೆಯಲ್ಲಿ ಶೇಕಡ 90ರಷ್ಟು ಕಡಿತ ಮಾಡಲಾಗಿದೆ’ ಎಂದು ದೂರಿದರು.

‘ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಅನುದಾನವನ್ನು ಶೇ 200ರಷ್ಟು ಹೆಚ್ಚಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ದೇವಾಲಯಗಳ ಅಭಿವೃದ್ಧಿ ₹ 600 ಕೋಟಿ ವಿಶೇಷ ಅನುದಾನ ಒದಗಿಸಿದ್ದರು. ಕಾಂಗ್ರೆಸ್ ಸರ್ಕಾರ ನಯಾ ಪೈಸೆ ನೀಡಿಲ್ಲ. ಇದು ರಾಮಲಿಂಗಾ ರೆಡ್ಡಿ ಅವರ ಬಜೆಟ್ ಅಲ್ಲ, ದಿನೇಶ್ ಗುಂಡೂರಾವ್ ಬಜೆಟ್ಟೂ ಅಲ್ಲ. ಜಮೀರ್ ಬಜೆಟ್’ ಎಂದರು.

ಹಟದಿಂದ ನಷ್ಟ: ಸಿದ್ದರಾಮಯ್ಯ ಅವರು ಬಜೆಟ್ನಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷಕ್ಕೆ ಇಳಿದಿದ್ದಾರೆ. ಇದು ಒಳ್ಳೆಯ ನಡೆ ಅಲ್ಲ. ತಮಿಳುನಾಡಿನ ಸಂಸ್ಕೃತಿಯನ್ನು ಈ ಸರ್ಕಾರ ಪಾಲಿಸುತ್ತಿದೆ. ಹಟಮಾರಿತನದಿಂದ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಹೇಳಿದರು.

‘ಮುಂಗಡದ ಅಂಗಡಿಯಲ್ಲಿ ತಳಿರು ತೋರಣದ ಸದ್ದು, ಅಂಗಡಿಯಲ್ಲಿ ಏನಿಲ್ಲ ಏನಿಲ್ಲ, ಖಾಲಿ ಡಬ್ಬ, ಖಾಲಿ ಡಬ್ಬ’ ಎಂಬ ಕವನ ವಾಚಿಸಿದ ಅಶೋಕ ಚರ್ಚೆ ಮುಗಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.