ಬೆಂಗಳೂರು: ಇನ್ಸ್ಪೆಕ್ಟರ್, ಎಸಿಪಿ ಹಾಗೂ ಇತರೆ ಪೊಲೀಸರು ಬಳಸುವ ಜೀಪುಗಳಿಗೆ ಡ್ಯಾಶ್ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಕಮಿಷನರ್ ಬಿ. ದಯಾನಂದ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಪೊಲೀಸರ ಹೊಯ್ಸಳ ಗಸ್ತು ವಾಹನಗಳಿಗೆ ಈಗಾಗಲೇ ಡ್ಯಾಶ್ ಕ್ಯಾಮೆರಾ ಅಳವಡಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದರಿಂದ, ಪೊಲೀಸರ ಎಲ್ಲ ಜೀಪುಗಳಿಗೆ ಡ್ಯಾಶ್ ಕ್ಯಾಮೆರಾ ಅಳವಡಿಸಲು ಕಮಿಷನರ್ ಅವರು ನಿರ್ಧರಿಸಿದ್ದಾರೆ.

‘ಪಾರದರ್ಶಕ ಆಡಳಿತ ವ್ಯವಸ್ಥೆ ಜಾರಿಗೊಳಿಸಲು ಜೀಪುಗಳಿಗೆ ಡ್ಯಾಶ್ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಜೀಪುಗಳ ಕ್ಯಾಮೆರಾದಲ್ಲಿ ದಾಖಲಾಗುವ ಪ್ರತಿಯೊಂದು ದೃಶ್ಯವನ್ನು ಕಮಾಂಡ್ ಕೇಂದ್ರದಲ್ಲಿ ವೀಕ್ಷಿಸಬಹುದಾಗಿದೆ. ಯಾರಾದರೂ ಪೊಲೀಸರು ಕರ್ತವ್ಯ ಲೋಪ ಎಸಗಿದರೆ, ಪರಿಶೀಲನೆ ನಡೆಸಿ ಕ್ರಮ ಜರುಗಿಸಲು ಸಾಧ್ಯವಾಗಲಿದೆ’ ಎಂದು ಕಮಿಷನರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.