ಬೆಂಗಳೂರು: ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಹಯೋಗದಲ್ಲಿ ಇದೇ 11 ಮತ್ತು 12ರಂದು ಬೆಂಗಳೂರು ನಗರ ಪತ್ರಿಕಾ ವಿತರಕರು ಮತ್ತು ಪತ್ರಿಕೆ ಹಂಚುವವರಿಗೆ ವಿಮಾ ಸೌಲಭ್ಯ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಯಶವಂತಪುರದ ಎಪಿಎಂಸಿ ಯಾರ್ಡ್‌ನ 6ನೇ ಮುಖ್ಯರಸ್ತೆಯಲ್ಲಿರುವ ಗಣೇಶ ದೇವಸ್ಥಾನ ಪಕ್ಕದ ಸಭಾಂಗಣದಲ್ಲಿ ಈ ನೋಂದಣಿ ಕಾರ್ಯಕ್ರಮವಿರುತ್ತದೆ. ದಿನಪತ್ರಿಕೆ ವಿತರಕರು ಮತ್ತು ಪತ್ರಿಕೆ ಹಂಚುವವರು ನೋಂದಣಿ ಮಾಡಿಸಿ, ‘ಇ–ಶ್ರಮ್’ ಕಾರ್ಡ್ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಶಂಭುಲಿಂಗ ಕೆ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ನೋಂದಣಿ ಮಾಡಿಸುವವರು ಆಧಾರ್ ಕಾರ್ಡ್ ತೆಗೆದುಕೊಂಡು ಹೋಗಬೇಕು. ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಆಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಪಿ.ಜಿ. ಬಾಲಾಜಿ, ಸೀನಿಯರ್ ಲೇಬರ್ ಇನ್‌ಸ್ಪೆಕ್ಟರ್– 9880217133, ಶಂಭುಲಿಂಗ ಕೆ.– 99725 34666 ಇವರನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.