ಬೆಂಗಳೂರು: ಒಳ ಮೀಸಲಾತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ತೀರ್ಮಾನ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಸದಸ್ಯರನ್ನು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅವಹೇಳನ ಮಾಡಲಾಗಿದ್ದು, ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೆಪಿಸಿಸಿ ಸಂಯೋಜಕ ಸತೀಶ್ ಅವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಒಳಮೀಸಲಾತಿ ಹೋರಾಟ ಸಮಿತಿ ವಿಜಯನಗರ ಜಿಲ್ಲೆ’ ಎಂಬ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಒಳ ಮೀಸಲಾತಿ ಕುರಿತು ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನವನ್ನು ಖಂಡಿಸಲಾಗಿದೆ. ಅಲ್ಲದೇ ನಿಂದನಾತ್ಮಕ ಬರಹಗಳನ್ನು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಹರಿಯಬಿಡಲಾಗಿದೆ. ಮುಖ್ಯಮಂತ್ರಿ ಅವರನ್ನು ನಿಂದಿಸಿ ಬರೆದಿರುವುದು ಮಾಜಿ ಸಚಿವ ಎಚ್.ಆಂಜನೇಯ ಅವರ ಗಮನಕ್ಕೂ ಬಂದಿದೆ. ಸಮಾಜದಲ್ಲಿ ಗಲಭೆ ಸೃಷ್ಟಿಸುವ ಉದ್ದೇಶದಿಂದ ಬರಹ ಬರೆದು ಹರಿಯಬಿಡಲಾಗಿದೆ’ ಎಂದು ಸತೀಶ್ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.