ಬೆಂಗಳೂರು: ಬಿಬಿಎಂಪಿಯ 2024–25ನೇ ಸಾಲಿನ ಆಯವ್ಯಯಕ್ಕೆ ನಾಗರಿಕರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ.

ಬಜೆಟ್ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ದೇಶನದಂತೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ನಾಗರಿಕ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿಯ ಮುಖ್ಯದ್ವಾರದ ಬಳಿ ಸಲಹಾ ಪೆಟ್ಟಿಗೆ ಇರಿಸಿದ್ದು, ಅಲ್ಲಿಗೆ ಸಲಹಾ ಪತ್ರಗಳನ್ನು ಹಾಕಬಹುದು ಎಂದು ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ್ ಕಲ್ಕೆರೆ ತಿಳಿಸಿದ್ದಾರೆ.

ಇ-ಮೇಲ್ bbmpbudget@gmail.com, suggestions2bbmpbudget@gmail.com ಗಳಿಗೆ ಸಲಹೆ, ಸೂಚನೆಗಳನ್ನು ಫೆಬ್ರುವರಿ 10ರೊಳಗೆ ಕಳುಹಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.