ಭಾರತೀನಗರ: ಐಪಿಎಲ್ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೋರಾಪುರ ಬಳಿ ಕೊಲೆಯಾದ ಪುನೀತ್ ಮನೆಗೆ ಭಾನುವಾರ ಭೇಟಿ ನೀಡಿದ ಶಾಸಕ ಕೆ.ಎಂ.ಉದಯ್, ಪುನೀತ್ ತಂದೆ ತಮ್ಮಯ್ಯ, ಕುಟುಂಬದವರಿಗೆ ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡಿದರು.

‘ಈ ಘಟನೆ ಮಾದಕ ವಸ್ತು ವ್ಯಸನದಿಂದ ನಡೆದ ಘಟನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಅನಿರೀಕ್ಷಿತವಾದ ಘಟನೆ ನಡೆದಿದ್ದು, ಪುತ್ರನನ್ನು ಕಳೆದುಕೊಂಡಿದ್ದೀರಿ. ಭಗವಂತ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಹೇಳಿದರು.

ಮದ್ದೂರು ಸಿಪಿಐ ಸಂತೋಷ್ ಅವರಿಗೆ ದೂರವಾಣಿ ಕರೆ ಮಾಡಿದ ಶಾಸಕ ಉದಯ್, ಪುನೀತ್ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದರು.

ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ್ದು, ಪೊಷಕರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಹೆಚ್ಚು ದಾಖಲುಮಾಡಬೇಕೆಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮುಖಂಡರಾದ ಕಲಾವಿದ ಬೋರಯ್ಯ, ಪ್ರಭುಸ್ವಾಮಿ, ವಸಂತ್, ಸಿಪಾಯಿ ಶ್ರೀನಿವಾಸ್‌ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.