ಬೆಂಗಳೂರು: ಮಣಿಪಾಲ್ ಆಸ್ಪತ್ರೆಗಳ ಸಮೂಹದ ನೆರವಿನಿಂದ ಅಂಗಾಂಗ ಕಸಿಗೆ ಒಳಗಾದ 20 ಮಂದಿ ಕುಟುಂಬದ ಸದಸ್ಯರೊಂದಿಗೆ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ವೀಕ್ಷಿಸಿದರು.

ಶನಿವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ ನುಡವಿನ ಐಪಿಎಲ್ ಪಂದ್ಯ ವೀಕ್ಷಣೆಗೆ ಆಸ್ಪತ್ರೆಯು ವ್ಯವಸ್ಥೆ ಮಾಡಿತ್ತು. ಆಸ್ಪತ್ರೆಗಳ ಸಮೂಹವು ವೈದ್ಯಕೀಯ ಸೇವೆಗೆ ಸಂಬಂಧಿಸಿದಂತೆ ಆರ್ಸಿಬಿ ಫ್ರಾಂಚೈಸಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಯಕೃತ್ತು, ಮೂತ್ರಪಿಂಡ, ಹೃದಯ, ಶ್ವಾಸಕೋಶ ಸೇರಿದಂತೆ ವಿವಿಧ ಅಂಗಾಂಗ ವೈಫಲ್ಯಕ್ಕೆ ಒಳಗಾದವರು ಮಣಿಪಾಲ್ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರಿಗೆ ಉಲ್ಲಾಸದ ಅನುಭವ ಒದಗಿಸುವ ಉದ್ದೇಶದಿಂದ ಅಗತ್ಯ ವೈದ್ಯಕೀಯ ಸಿಬ್ಬಂದಿಯ ನೆರವಿನೊಂದಿಗೆ ವೀಕ್ಷಣೆಗೆ ಆಸ್ಪತ್ರೆಯು ಅವಕಾಶ ಕಲ್ಪಿಸಿತ್ತು.

‘ಅಂಗಾಂಗ ಕಸಿಗೆ ಒಳಗಾದವರು ಚೇತರಿಸಿಕೊಳ್ಳುವ ಅವಧಿಯಲ್ಲಿ ಭಯ, ದುಃಖ, ಆತಂಕ ಮತ್ತು ಖಿನ್ನತೆಯನ್ನು ಅನುಭವಿಸುತ್ತಾರೆ. ಚೇತರಿಕೆಯ ನಂತರವೂ ಈ ಭಾವನೆಗಳು ಉಳಿಯುತ್ತವೆ. ಹೊಸ ಅವಕಾಶಗಳಿಗೆ ತೆರೆದುಕೊಳ್ಳಲು, ಮಾನಸಿಕವಾಗಿ ಸದೃಢವಾಗಲು ಅವರಲ್ಲಿನ ಭಯವನ್ನು ಹೋಗಲಾಡಿಸಬೇಕು. ಹೀಗಾಗಿ, ಆರ್ಸಿಬಿ ಫ್ರಾಂಚೈಸಿ ನೆರವಿನಿಂದ ಐಪಿಎಲ್ ಪಂದ್ಯಾವಳಿ ವೀಕ್ಷಣೆಗೆ ವಿಶೇಷ ಪ್ರವೇಶ ಕಲ್ಪಿಸಲಾಗಿತ್ತು’ ಎಂದು ಆಸ್ಪತ್ರೆ ಹೇಳಿದೆ.

‘ಕಸಿ ಚಿಕಿತ್ಸೆಗೆ ಒಳಗಾದವರಿಗೆ ಮನೋರಂಜನೆ ಅಗತ್ಯ. ಐಪಿಎಲ್ ಪಂದ್ಯಾವಳಿ ವೀಕ್ಷಣೆಯಿಂದ ಕಸಿ ಮಾಡಿಸಿಕೊಂಡವರಿಗೆ ಹೊಸ ಉತ್ಸಾಹ ಮೂಡಿದೆ’ ಎಂದು ಮಣಿಪಾಲ್ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ತಿಕ್ ರಾಜಗೋಪಾಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.