ಬೆಂಗಳೂರು: ತೆರಿಗೆ ವಂಚನೆ ಮತ್ತು ಚುನಾವಣಾ ಉದ್ದೇಶಕ್ಕೆ ಹಣ ಸಂಗ್ರಹಿಸಿರುವ ಅನುಮಾನದ ಮೇಲೆ ನಗರದ ಹಲವು ಬಿಲ್ಡರ್ಗಳ ಮೇಲೆ ಶನಿವಾರ ದಾಳಿ ನಡೆಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ.

ವಿಲ್ಸನ್ ಗಾರ್ಡನ್, ಫ್ರೇಜರ್ ಟೌನ್, ಕೆ.ಆರ್. ಪುರ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆದಿದ್ದು, ರಾತ್ರಿಯವರೆಗೂ ಶೋಧ ಕಾರ್ಯ ನಡೆಯಿತು. ರಾಜಕಾರಣಿಗಳ ಜತೆ ನಿಕಟವಾದ ನಂಟು ಹೊಂದಿರುವ ಕೆಲವು ಬಿಲ್ಡರ್ಗಳನ್ನು ಕೇಂದ್ರೀಕರಿಸಿ ಈ ಕಾರ್ಯಾಚರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಿಲ್ಡರ್ಗಳ ಮನೆಗಳು, ಕಚೇರಿಗಳು ಮತ್ತು ಅವರ ನಿಕಟವರ್ತಿಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ಅಕ್ರಮ ತಡೆಯಲು ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅದರ ಭಾಗವಾಗಿಯೇ ಈ ಕಾರ್ಯಾಚರಣೆಯೂ ನಡೆದಿದೆ ಎಂದು ಮೂಲಗಳು ಹೇಳಿವೆ.

ರಿಯಲ್ ಎಸ್ಟೇಟ್ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
.ಬೆಂಗಳೂರು | ಐ.ಟಿ ಕಾರ್ಯಾಚರಣೆ: ₹ 1.13 ಕೋಟಿ ನಗದು ವಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.