ಬೆಂಗಳೂರು: ಚುನಾವಣಾ ಅಕ್ರಮ ತಡೆಯಲು ಬೆಂಗಳೂರಿನ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ₹ 1.39 ಕೋಟಿ ನಗದು ಮತ್ತು ₹ 90 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ಕಾರ್ಯಾಚರಣೆಯಲ್ಲಿ ಸಂಪಂಗಿ ರಾಮನಗರದಲ್ಲಿ ₹ 28.75 ಲಕ್ಷ, ಕೋರಮಂಗಲದ ಎರಡು ಸ್ಥಳಗಳಲ್ಲಿ ಒಟ್ಟು ₹ 1.10 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಮುರುಗೇಶಪಾಳ್ಯದಲ್ಲಿ ₹ 71.16 ಲಕ್ಷ ಮೌಲ್ಯದ ಚಿನ್ನ ಹಾಗೂ ₹ 9 ಲಕ್ಷ ಮೌಲ್ಯದ ವಜ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಚುನಾವಣಾ ಅಕ್ರಮ ತಡೆಯ ಕಾರ್ಯಾಚರಣೆಗಳಲ್ಲಿ ಈವರೆಗೆ ₹ 9.64 ಕೋಟಿ ನಗದು, ₹ 1.78 ಕೋಟಿ ಮೌಲ್ಯದ ಉಚಿತ ಉಡುಗೊರೆಗಳು, ₹ 22.85 ಕೋಟಿ ಮೌಲ್ಯದ ಮದ್ಯ, ₹ 53 ಲಕ್ಷ ಮೌಲ್ಯದ ಮಾದಕವಸ್ತು, ₹ 36.41 ಕೋಟಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಶಕ್ಕೆ ಪಡೆಯಲಾಗಿದೆ ಎಂದು ವಿವರ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.