ರಾಜರಾಜೇಶ್ವರಿನಗರ: ಯಶವಂತಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎಂ.ನಾರಾಯಣಗೌಡ ಅವರ ನಾಗರಬಾವಿಯಲ್ಲಿರುವ ಮನೆಗೆ ಭೇಟಿ ನೀಡಿ ಜೆಡಿಎಸ್ಗೆ ಬೆಂಬಲ ನೀಡುವಂತೆ ಕೋರಿದರು. ಬಳಿಕ ಪರಿಯಪ್ಪನಪಾಳ್ಯದಲ್ಲಿ ಮತ ಯಾಚಿಸಿ, ‘ಎರಡು ಬಾರಿ ಪರಾಜಿತನಾಗಿದ್ದು, ಈ ಸಲ ಗೆಲ್ಲಿಸುವ ಮೂಲಕ ಜನರ ಸೇವೆಗೆ ಅವಕಾಶ ನೀಡಬೇಕು’ ಎಂದರು.

ಜೆಡಿಎಸ್ ಮುಖಂಡ ಹನುಮಂತರಾಯಪ್ಪ, ‘ಪಕ್ಷಾಂತರ ಮಾಡಿದ ಶಾಸಕರಿಗೆ ವಿವಿಧ ರಾಜ್ಯಗಳಲ್ಲಿ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ನಮ್ಮ ರಾಜ್ಯದಲ್ಲೂ ಪಕ್ಷಾಂತರಿಗಳನ್ನು ಸೋಲಿಸಬೇಕು’ ಎಂದು ಮನವಿ ಮಾಡಿದರು.

ಬಿಜೆಪಿ ಪ್ರಚಾರ: ‘ಕಳೆದ 20 ವರ್ಷಗಳಿಂದ ಕ್ಷೇತ್ರದ ಜನರ ಜತೆ ಇದ್ದೇನೆ. ಸೋತಾಗಲೂ ನಾನು ಕ್ಷೇತ್ರ ಬಿಟ್ಟು ಹೋಗಿಲ್ಲ. ಚುನಾವಣೆ ಮುಗಿಯುತ್ತಿದ್ದಂತೆ ಜವರಾಯಿಗೌಡ ಕಾಣೆಯಾಗುತ್ತಾರೆ. 5 ವರ್ಷ ಕ್ಷೇತ್ರದ ಕಡೆ ತಿರುಗಿಯೂ ನೋಡುವುದಿಲ್ಲ’ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಟೀಕಿಸಿದರು. ಕೆಂಚನಪುರ, ಸೂಲಿಕೆರೆ, ದೊಡ್ಡಬಸ್ತಿಯಲ್ಲಿ ಪ್ರಚಾರ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.