ಬೆಂಗಳೂರು: ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಘಟಕವು ಸೆ.1ರಿಂದ ವಾರದ ಎಲ್ಲ ದಿನ 24 ಗಂಟೆ ಸೇವೆ ಒದಗಿಸಲಿದೆ.

ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಸುತ್ತೋಲೆ ಹೊರಡಿಸಿದ್ದಾರೆ. ಸಂಸ್ಥೆಯ ಈ ಘಟಕವು ಇಷ್ಟು ದಿನ ಸಂಜೆ 5 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿತ್ತು.

ಆ.27ರಂದು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ₹ 150 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೃದ್ರೋಗಿಗಳ ದೃಷ್ಟಿಯಿಂದ ಘಟಕದಲ್ಲಿ 24 ಗಂಟೆಗಳೂ ಸೇವೆ ಒದಗಿಸಬೇಕೆಂದು ಸಂಸ್ಥೆಯ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ, ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.