ಬೆಂಗಳೂರು: ಜಯಮಹಲ್ ರಸ್ತೆ ಟಿಡಿಆರ್ (ಅಭಿವೃದ್ಧಿ ಹಕ್ಕು) ಪ್ರಮಾಣ ಪತ್ರ ಮಂಜೂರು ನಿಯಮಗಳನ್ನು ಮಾರ್ಪಡಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಚಿಂತಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

ಈ ವಿಷಯವನ್ನು ಸಚಿವ ಸಂಪುಟದ ಮುಂದೆ ಗುರುವಾರ ಮಂಡಿಸಲಾಗುತ್ತಿದೆ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಅವರು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ವಿವರಿಸಿದರು. ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯ ಮಂಡಿಸುವಂತೆ ತಿಳಿಸಿದ ಪೀಠ, ವಿಚಾರಣೆಯನ್ನು ಮಾ.10ಕ್ಕೆ ಮುಂದೂಡಿತು.

ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ‘ಸಮರ್ಪಣ’ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಮೇಕ್ರಿ ವೃತ್ತದ ತನಕ ರಸ್ತೆ ವಿಸ್ತರಣೆ ಕಾಮಗಾರಿ ಆರಂಭಿಸಿಲ್ಲ ಎಂದು ಆರೋಪಿಸಿದ್ದರು.

ಭೂಸ್ವಾಧೀನ ಪ್ರಶ್ನಿಸಿ ಮೈಸೂರು ರಾಜಮನೆತನದ ಸದಸ್ಯರು ನ್ಯಾಯಾಲಯದ ಮೊರೆ ಹೋಗಿದ್ದರು. ಟಿಡಿಆರ್ ನಿಯಮಗಳ ಪ್ರಕಾರ ಅರ್ಜಿದಾರರಿಗೆ ಪ್ರಮಾಣ ಪತ್ರ ನೀಡುವಂತೆ ಬಿಬಿಎಂಪಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.