ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ತೆರಿಗೆ ಹೆಚ್ಚಳ ವಿರೋಧಿಸಿ ಜೆಡಿಎಸ್‌ ಪ್ರತಿಭಟನೆ

Published : 18 ಜೂನ್ 2024, 22:50 IST
Last Updated : 18 ಜೂನ್ 2024, 22:50 IST
ಫಾಲೋ ಮಾಡಿ
Comments

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಜೆಡಿಎಸ್‌ ಕಾರ್ಯಕರ್ತರು ಕುದುರೆ ಗಾಡಿ ಹಾಗೂ ಸೈಕಲ್‌ ಮೇಲೆ ಮೆರವಣಿಗೆ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಜೆಡಿಎಸ್‌ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶ್‌ ಗೌಡ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ, ಟಿ.ಎ. ಶರವಣ, ಟಿ.ಎನ್‌. ಜವರಾಯಿಗೌಡ, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ಮಹಾನಗರ ಘಟಕದ ಕಾರ್ಯಾಧ್ಯಕ್ಷ ಜೆ.ಟಿ.ರೇವಣ್ಣ, ಬೆಂಗಳೂರು ಮಹಾನಗರದ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ರಮೇಶ್‌ ಗೌಡ, ‘ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಜನವಿರೋಧಿ ನೀತಿಗಳನ್ನು ಹೇರುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಸಂಗ್ರಹಿಸಲು ಜನರ ಮೇಲೆ ತೆರಿಗೆ ವಿಧಿಸುವುದು ಅನ್ಯಾಯ. ಗ್ಯಾರಂಟಿ ಕೊಡುವುದಾಗಿ ಹೇಳಿ ಜನರ ಜೇಬಿಗೆ ಕೈ ಹಾಕುವುದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು.

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಮಾರಾಟ ತೆರಿಗೆ ಹೆಚ್ಚಳ ವಿರೋಧಿಸುವ ಘೋಷಣಾ ಫಲಕಗಳನ್ನು ಹಿಡಿದಿದ್ದ ಜೆಡಿಎಸ್‌ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT