ಬೆಂಗಳೂರು: ಮನೆ ಬಾಗಿಲು ಒಡೆದು ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಹಾಲಕ್ಷ್ಮಿಪುರಂ ಪೊಲೀಸರು ಬಂಧಿಸಿದ್ದಾರೆ.

ಜೆ.ಪಿ ನಗರದ ಮಹಾವೀರ ಕ್ಲಾಸಿಕ್ ಅಪಾರ್ಟ್‌ಮೆಂಟ್‌ನ ನಿವಾಸಿ ಶಂಕರ (44) ಹಾಗೂ ದೊರೆಸ್ವಾಮಿ ಪಾಳ್ಯದ ರವಿ (36) ಬಂಧಿತರು.

ಬಂಧಿತರಿಂದ ₹ 40 ಲಕ್ಷ ಮೌಲ್ಯದ 800 ಗ್ರಾಂ ಚಿನ್ನಾಭರಣ ಹಾಗೂ 3 ಕೆ.ಜಿ ಬೆಳ್ಳಿ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ.

‘ಇವರ ವಿರುದ್ಧ ಈ ಹಿಂದೆ ಎಚ್‌ಎಎಲ್ ಲೇಔಟ್, ಕೋರಮಂಗಲ, ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿ ಬಂಧಿಸಲಾಗಿತ್ತು. ಸ್ವಲ್ಪ ದಿನಗಳು ಸುಮ್ಮನಿದ್ದ ಆರೋಪಿಗಳು ಮತ್ತೆ ಕಳ್ಳತನಕ್ಕೆ ಮುಂದಾಗಿದ್ದರು. ವರಮಹಾಲಕ್ಷ್ಮಿ ಹಬ್ಬದಂದು ಮಹಾಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ಕಳವು ಮಾಡಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.