ಬೆಂಗಳೂರು: ಅಂಗವಿಕಲರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಕೌಶಲ ಅಭಿವೃದ್ಧಿ ಮತ್ತು ಜೀವನೋಪಾಯ ಮತ್ತು ಜೀವನೋಪಾಯ ಇಲಾಖೆ ಹಾಗೂ ಬರ್ಕೆಯ್ಸ್ ಸಹಯೋಗದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯು ಶುಕ್ರವಾರ ಅಂಗವಿಕಲರಿಗಾಗಿ ಉದ್ಯೋಗ ಮೇಳ ಆಯೋಜಿಸಿತ್ತು.

ಕೋವಿಡ್ ನಂತರ ಉದ್ಯೋಗ ಕಳೆದುಕೊಂಡಿರುವವವರಿಗೆ ಮತ್ತು ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ ನೆರವಾಗುವ ಉದ್ದೇಶದಿಂದ ಮೇಳ ಆಯೋಜಿಸಲಾಗಿತ್ತು.

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವೀಧರರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದರು. ಅವಿಘ್ನಾ ಎಂಟರ್‌ಪ್ರೈಸಸ್, ವಿ ಮಾರ್ಟ್ ರಿಟೇಲ್ ಲಿಮಿಟೆಡ್, ಬರ್ಗರ್ ಕಿಂಗ್ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊಂಡಿದ್ದವು. ಸ್ವಂತ ಉದ್ಯಮ ಆರಂಭಿಸಲು ಬಯಸುವವರಿಗೂ ಸಹ ಮಾರ್ಗದರ್ಶನ ನೀಡಲಾಯಿತು ಎಂದು ಸಂಸ್ಥೆ ತಿಳಿಸಿದೆ.

ಮೇಳದಲ್ಲಿ ಭಾಗಿಯಾಗಿದ್ದ ಕೌಶಲ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೇಲ್ವಕುಮಾರ್, ‘ಅಂಗವಿಕಲರಿಗೂ ಸಮಾಜದಲ್ಲಿ ಸಮಾನ ಅವಕಾಶಗಳು ದೊರೆಯಬೇಕು. ಸಮರ್ಥನಂ ಸಂಸ್ಥೆ ಈ ನಿಟ್ಟಿನಲ್ಲಿ ಅಂಗವಿಕಲರಿಗೆ ನೆರವಾಗುತ್ತಿರುವುದು ಶ್ಲಾಘನೀಯ. ಸರ್ಕಾರವು ಸಹ ಉಚಿತ ತರಬೇತಿ ಕಾರ್ಯಾಗಾರಗಳ ಮೂಲಕ ಉದ್ಯೋಗ ದೊರಕಿಸಿಕೊಡಲು ನೆರವಾಗುತ್ತಿದೆ’ ಎಂದು ತಿಳಿಸಿದರು. ಅಂಗವಿಕಲರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕಿ ಕೆ.ಎಸ್. ಲತಾ ಕುಮಾರಿ ಮಾತನಾಡಿ, ‘ಮುಂದಿನ ದಿನಗಳಲ್ಲಿಯೂ ಅಂಗವಿಕಲರಿಗೆ ಉದ್ಯೋಗ ಕಲ್ಪಿಸಲು ಮೇಳಗಳನ್ನು ಆಯೋಜಿಸಲು ನೆರವು ನೀಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.