ಬೆಂಗಳೂರು: ‘ಪದ್ಮನಾಭನಗರದ ಪುಟ್ಟಲಿಂಗಯ್ಯ ಆಟದ ಮೈದಾನದಲ್ಲಿ ಆಗಸ್ಟ್ 17ರಂದು ‘ಬೃಹತ್ ಉದ್ಯೋಗ ಮೇಳ’ವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜಧಾನಿ ಬೆಂಗಳೂರಿನಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಮೇಳದಲ್ಲಿ 150ಕ್ಕೂ ಹೆಚ್ಚು ಕಾರ್ಪೊರೇಟ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳು ಭಾಗವಹಿಸಲಿವೆ. ಮೂರು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶಗಳನ್ನು ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

‘ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಪದವಿ ಪಡೆದ ಅಥವಾ ಅನುತ್ತೀರ್ಣರಾದವರು ಈ ಮೇಳದಲ್ಲಿ ಭಾಗವಹಿಸಬಹುದು. ಆಸಕ್ತರು ಆಗಸ್ಟ್ 10ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮೇಳವನ್ನು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ, ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉದ್ಘಾಟಿಸಲಿದ್ದಾರೆ’ ಎಂದರು.

ಮಾಹಿತಿಗೆ: 98441 59891, 91086 36275ಗೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.