ಬೆಂಗಳೂರು:ಬಿಬಿಎಂಪಿಯ ಪೂರ್ವದ ಹೆಬ್ಬಾಗಿಲಿನಂತಿರುವ ಕೆ.ಆರ್.ಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕಬಿಜೆಪಿ ಅಭ್ಯರ್ಥಿ ಬಿ.ಎ.ಬಸವರಾಜು (ಬೈರತಿ ಬಸವರಾಜು) ಹ್ಯಾಟ್ರಿಕ್ ಜಯದ ಸಾಧನೆ ಮಾಡಿದರು.

ಈ ಚುನಾವಣೆಯುಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ನೇರ ಹಣಾಹಣಿಗೆ ಸಾಕ್ಷಿಯಾಯಿತು. ಬಸವರಾಜು ತಮ್ಮ ಸಮೀಪದ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿಎಂ.ನಾರಾಯಣ ಸ್ವಾಮಿ ವಿರುದ್ಧ62,646ಮತಗಳ ಅಂತರದಿಂದ ಜಯ ಗಳಿಸಿದರು.

ಇದನ್ನೂ ಓದಿ:ಕೆ.ಆರ್.ಪುರ ಅಖಾಡದಲ್ಲೊಂದು ಸುತ್ತು| ವ್ಯಕ್ತಿ ನಿಷ್ಠೆ–ಪಕ್ಷ ನಿಷ್ಠೆಯ ಪೈಪೋಟಿ

2018ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಬಸವರಾಜು1,35,404 ಮತ ಪಡೆದುಕೊಂಡಿದ್ದರು. ಆ ಮೂಲಕ ಆಗ ಬಿಜೆಪಿಯಿಂದ ಸ್ಪರ್ಧಿಸಿದ್ದ ಎನ್.ಎಸ್.ನಂದೀಶ್ ರೆಡ್ಡಿ ವಿರುದ್ಧ 32,729 ಮತಗಳ ಅಂತರದಿಂದ ಜಯಗಳಿಸಿದ್ದರು.

ಬಿಜೆಪಿಯಿಂದ ಬಸವರಾಜು ಅವರಿಗೆ ಟಿಕೆಟ್ ನೀಡಿದಾಗ ನಂದೀಶ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗದಂತೆ, ನಂದೀಶ್ ರೆಡ್ಡಿ ಅವರನ್ನುಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಆ ಮೂಲಕ ಇಬ್ಬರೂ ಒಂದಾಗಿ ಚುನಾವಣೆಗೆ ಹೋಗುವಂತೆ ಬಿಜೆಪಿ ನೋಡಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.