ಬೆಂಗಳೂರು: ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಮಹದೇವಪುರ ಬಳಿಯ ಚನ್ನಚಂದ್ರ ಗ್ರಾಮದ ಶ್ರೀನಿವಾಸ್ ಹಾಗೂ ಆತನ ಕುಟುಂಬದವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನಿಸಿದ್ದರು. ವಿಷ ಕುಡಿದ ವಿಡಿಯೊವನ್ನು ಫೇಸ್ಬುಕ್ನಲ್ಲಿ ನೇರಪ್ರಸಾರ ಮಾಡಿದ್ದರು. ಪರಿಚಯಸ್ಥರೇ ಮನೆಗೆ ಹೋಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಪರಿಶಿಷ್ಟ ಪಂಗಡದ ಶ್ರೀನಿವಾಸ್ ಹಾಗೂ ಕುಟುಂಬದವರಿಗೆ, ಸ್ಥಳೀಯ ಕೆಲ ಸಮುದಾಯದ ಜನರು ಕಿರುಕುಳ ನೀಡುತ್ತಿದ್ದರು. ಸಣ್ಣ ವಿಷಯಕ್ಕೂ ಜಗಳ ತೆಗೆದು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದರು’ ಎಂಬುದಾಗಿ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ. ಜೊತೆಗೆ, ತಮ್ಮ ವಿರುದ್ಧವೇ ಸ್ಥಳೀಯರು ಠಾಣೆಗೆ ದೂರು ನೀಡಿದ್ದರೆಂದು ಶ್ರೀನಿವಾಸ್ ಹೇಳಿದ್ದಾರೆ. ಈ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

‘ಮೂವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರಿಂದ ಪ್ರಾಥಮಿಕ ಹೇಳಿಕೆ ಮಾತ್ರ ಪಡೆಯಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಪೂರ್ಣ ಮಾಹಿತಿ ಪಡೆಯಲಾಗುವುದು’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.