ಬೆಂಗಳೂರು: ನಗರಕ್ಕೆ ಹೊರ ರಾಜ್ಯದವರ ವಲಸೆ ತಿಳಿಯಲು ತಜ್ಞರ ಸಮಿತಿ ರಚಿಸಬೇಕು ಎಂದು ಕನ್ನಡ ಗೆಳೆಯರ ಬಳಗ ಹಾಗೂ ಕರ್ನಾಟಕ ವಿಕಾಸ ರಂಗ ಜಂಟಿಯಾಗಿ ಸರ್ಕಾರಕ್ಕೆ ಆಗ್ರಹಿಸಿವೆ.

ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿವೆ. ‘ಬೆಂಗಳೂರಿನಲ್ಲಿ ಕನ್ನಡಿಗರಿಗೆ ಕೆಲಸ ಸಿಗುತ್ತಿಲ್ಲ. ಅದರಲ್ಲೂ ಖಾಸಗಿ ವಲಯದಲ್ಲಿ ಪರ ರಾಜ್ಯದವರೇ ತುಂಬಿದ್ದಾರೆ. ವ್ಯಾಪಾರ, ವಾಣಿಜ್ಯ ಕ್ಷೇತ್ರವೂ ವಲಸಿಗರ ಪಾಲಾಗಿದೆ. ಎಷ್ಟೋ ವಸತಿ ಸಮುಚ್ಚಯಗಳಲ್ಲಿ ಕನ್ನಡಿಗರಿಗೆ ಮನೆ ಸಿಗುವುದಿಲ್ಲ. 2011ರ ಜನಗಣತಿಯಂತೆ ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಶೇ 38 ರಷ್ಟು ಮಾತ್ರ. ಪ್ರಸ್ತುತ ಕನ್ನಡಿಗರ ಸಂಖ್ಯೆ ಇನ್ನಷ್ಟೂ ಇಳಿದಿರುವ ಬಗ್ಗೆ ಕಳವಳ ವ್ಯಕ್ತವಾಗಿದೆ. ಹೊರ ರಾಜ್ಯದವರ ವಲಸೆಯು ಕನ್ನಡ ಭಾಷೆ, ಸಂಸ್ಕೃತಿಗಳ ಮೇಲೂ ಸವಾರಿ ನಡೆಸುತ್ತಿದೆ’ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ಹಾಗೂ ವಿಕಾಸರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ.

‘ಹೊರ ರಾಜ್ಯದ ವಲಸೆಯ ಪರಿಣಾಮ ತಿಳಿದರೆ ಕನ್ನಡ ವಾತಾವರಣ ಸೃಷ್ಟಿಗೆ ಏನು ಮಾಡಬಹುದು ಎಂಬುದನ್ನು ತಿಳಿಯಲು ಸಹಾಯವಾಗುತ್ತದೆ. ಆದ್ದರಿಂದ ಒಂದು ತಜ್ಞರ ಸಮಿತಿಯನ್ನು ರಚಿಸಬೇಕು. ‘ಕನ್ನಡ ಬೆಂಗಳೂರು-ಸುಂದರ ಬೆಂಗಳೂರು’ ಎಂಬ ವಿಶೇಷ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

undefined undefined

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.