ಬೆಂಗಳೂರು: ಲಾಂಛನದಲ್ಲಿ ಕನ್ನಡ ಪದಗಳನ್ನು ಬಳಸುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿದೆ.

ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಕನ್ನಡ ಕಡೆಗಣಿಸಲಾಗುತ್ತಿದೆ ಎಂಬ ಕಾರಣಕ್ಕೆ ಕೆಲ ದಿನಗಳ ಹಿಂದಷ್ಟೇ ಪ್ರಾಧಿಕಾರವು ಕ್ರಿಕೆಟ್ ಸಂಸ್ಥೆಗೆ ನೋಟಿಸ್ ನೀಡಿತ್ತು. ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಸಂಸ್ಥೆ, ‘ಮಹಾರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಸಮಾರಂಭದಲ್ಲಿ ಅಚಾತುರ್ಯದಿಂದ ಕನ್ನಡ ಬೋರ್ಡ್ ಇರಲಿಲ್ಲ. ಇದರ ಹಿಂದೆ ಬೇರೆ ಕೆಟ್ಟ ಉದ್ದೇಶವಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲಾಗುವುದು’ ಎಂದು ತಿಳಿಸಿದೆ.

ಇದಕ್ಕೆ ಪ್ರತಿಯಾಗಿ ಪತ್ರ ಬರೆದಿರುವ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ‘ತಮ್ಮ ಸಂಸ್ಥೆಯ ಲಾಂಛನ ಸಂಪೂರ್ಣ ಆಂಗ್ಲಮಯವಾಗಿದೆ. ಕನ್ನಡ ಬೆಳೆಸುವ ನಿಟ್ಟಿನಲ್ಲಿ ಮತ್ತು ಇನ್ನಾವುದೇ ಭಿನ್ನಾಭಿಪ್ರಾಯಕ್ಕೆ ಆಸ್ಪದೆ ನೀಡದೆ ಆದಷ್ಟು ಬೇಗ ಲಾಂಛನದಲ್ಲಿ ಕನ್ನಡ ಪದಗಳನ್ನು ಬಳಸಬೇಕು’ ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.