ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2024–25ನೇ ಸಾಲಿನ ‘ಕನ್ನಡ ಪ್ರವೇಶ’, ‘ಕಾವ’, ‘ಜಾಣ’ ಹಾಗೂ ‘ರತ್ನ’ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಿದೆ.
ಈ ಮೊದಲು ಸೆ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಾರ್ವಜನಿಕರ ಹಿತಾಸಕ್ತಿ ಮೇರೆಗೆ ಅವಧಿ ವಿಸ್ತರಿಸಲಾಗಿದೆ. 2024ರ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆ ನಡೆಯಲಿದೆ. ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ₹ 25 ಪಾವತಿಸಿ, ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆ ಪಡೆಯಬಹುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕವೂ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ₹ 25 ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.