ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2023ನೇ ಸಾಲಿನ ‘ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ವಿದ್ವಾಂಸ ಪ್ರೊ. ತೇಜಸ್ವಿ ಕಟ್ಟೀಮನಿ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 51 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ತೇಜಸ್ವಿ ಕಟ್ಟೀಮನಿ ಅವರು ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದವರು. ಕೇಂದ್ರಿಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅವರು, ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಕನ್ನಡದ ಹಲವು ಕೃತಿಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗೆ ಭಾಷಾಂತರ ಮಾಡಿದ್ದಾರೆ. ಅನ್ಯ ಭಾಷೆಗಳ ಕೃತಿಗಳನ್ನು ಕನ್ನಡಕ್ಕೆ ತಂದಿದ್ದಾರೆ ಎಂದು ಮಹೇಶ ಜೋಶಿ ತಿಳಿಸಿದ್ದಾರೆ.

2022ನೇ ಸಾಲಿನ ‘ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.