ಬೆಂಗಳೂರು: ‘ಕನ್ನಡದ ಭವ್ಯ ಇತಿಹಾಸ ಕುರಿತು ಯುವ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಶನಿವಾರ ಆಯೋಜಿಸಿದ್ದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಕನ್ನಡದ ಕಾವ್ಯಗಳು, ನಾಟಕಗಳು, ಕಥೆಗಳು, ಕಾದಂಬರಿಗಳು ಹಾಗೂ ವಚನಗಳ ಬಗ್ಗೆ ಓದುಗರಲ್ಲಿ ಜಾಗೃತಿ ಮೂಡಿಸಬೇಕು. ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸ ಇದೆ. ಕನ್ನಡಿಗರು ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕನ್ನಡ ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ನುಡಿದರು.

ಸಮ್ಮೇಳನಾಧ್ಯಕ್ಷೆ ವಿ.ವಾಣಿ ಗೋವಿಂದರಾಜು ಅವರು, ಐ.ಟಿ ಕಚೇರಿ, ಕಾರ್ಖಾನೆಗಳು, ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕನ್ನಡ ಸಂಘ ಸ್ಥಾಪಿಸಿ ಕನ್ನಡ ಓದಲು, ಬರೆಯಲು ಮಾತನಾಡಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

‘ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿವೆ. ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳಬೇಕಾದ ಅಗತ್ಯವಿದೆ‘ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ನಗರ ಘಟಕ ಅಧ್ಯಕ್ಷ ಪ್ರಕಾಶ್ ಮೂರ್ತಿ ಅವರು ವಿಧಾನಸಭಾ ಕ್ಷೇತ್ರದಲ್ಲಿ ಬಿಡಿಎ ಅಥವಾ ಬಿಬಿಎಂಪಿ ಜಾಗದಲ್ಲಿ ಗಾಂಧಿ ಭವನ ನಿರ್ಮಿಸಿಕೊಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಇದಕ್ಕೂ ಮುನ್ನ ಧ್ವಜಾರೋಹಣದ ಬಳಿಕ ಶ್ರೀರಾಮಪುರ ಸನ್ ರೈಸ್ ವೃತ್ತದಿಂದ ಶೇಷಾದ್ರಿಪುರದವರೆಗೆ ಸಮ್ಮೇಳನಾಧ್ಯಕ್ಷೆಯವರ ಹಾಗೂ ಕನ್ನಡ ಜಾಗೃತಿ ಮೆರವಣಿಗೆ ನಡೆಯಿತು. ಮಕ್ಕಳು, ಕನ್ನಡಾಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿ ಮೆರುಗು ಹೆಚ್ಚಿಸಿದರು.

ಸಾಧಕರಿಗೆ ಸನ್ಮಾನ: ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕನ್ನಡಕ್ಕಾಗಿ ಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಯಿತು.

ಗಾಂಧಿನಗರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗೌಡಗೆರೆ ಮಾಯುಶ್ರೀ, ನಿಕಟಪೂರ್ವ ಅಧ್ಯಕ್ಷ ವೂಡೇ ಪಿ.ಕೃಷ್ಣ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಟಿ. ಮಲ್ಲೇಶ್, ಆರ್.ಸತ್ಯನಾರಾಯಣ, ಲತಾ ರಾಥೋಡ್, ಶರವಣ, ಶಿವಕುಮಾರ್ ಭಾಗವಹಿಸಿದ್ದರು.

ಕನ್ನಡ ಉಳಿಸಿ, ಬೆಳೆಸುವುದು ಎಲ್ಲರ ಕರ್ತವ್ಯ ಮುಚ್ಚುವ ಸ್ಥಿತಿಯಲ್ಲಿರುವ ಕನ್ನಡ ಶಾಲೆಗಳ ಉಳಿಸಬೇಕಾಗಿದೆ ಸಮ್ಮೇಳನ ನಿಮಿತ್ತ ಕನ್ನಡ ಜಾಗೃತಿ ಮೆರವಣಿಗೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.