ಬೆಂಗಳೂರು: ‘ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ (ಕೆಎಸ್‌ಸಿಎ) ಕನ್ನಡ ಭಾಷೆಗೂ, ಕನ್ನಡಿಗ ಆಟಗಾರರಿಗೂ ಅವಕಾಶ ನೀಡುತ್ತಿಲ್ಲ‘ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಷಾದ ವ್ಯಕ್ತಪಡಿಸಿದೆ. ಈ ಬಗ್ಗೆ ಏಳು ದಿನಗಳ ಒಳಗೆ ವರದಿ ನೀಡುವಂತೆ ಕೆಎಸ್‌ಸಿಎಗೆ ಪತ್ರ ಬರೆದಿದೆ.

ಕೆಎಸ್‌ಸಿಎ ಕನ್ನಡ ಭಾಷೆಯನ್ನು ನಿರ್ಲಕ್ಷಿಸುತ್ತಿರುವ ಬಗ್ಗೆ ಮತ್ತು ಕನ್ನಡದ ಮಕ್ಕಳಿಗೆ ಅವಕಾಶ ನೀಡದೇ ವಂಚಿಸುತ್ತಿರುವ ಬಗ್ಗೆ ಮರಿಲಿಂಗಗೌಡ ಮಾಲಿ ಪಾಟೀಲ್ ಪ್ರಾಧಿಕಾರಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಧಿಕಾರವು ಪತ್ರ ಬರೆದಿದೆ.

ಕರ್ನಾಟಕ ರಾಜ್ಯಭಾಷಾ ಅಧಿನಿಯಮ 1963ರ ಪ್ರಕಾರ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆಯನ್ವಯ ರಾಜ್ಯದ ಎಲ್ಲ ಹಂತಗಳಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು. ಆದರೆ ಕೆಎಸ್‌ಸಿಎಯಲ್ಲಿ ಕನ್ನಡ ಭಾಷೆಯನ್ನು ಬಳಸುತ್ತಿಲ್ಲ. ಕನ್ನಡಿಗರಿಗೆ ಅವಕಾಶ ಸಿಗುತ್ತಿಲ್ಲ. ಕೆಎಸ್‌ಸಿಎ ಲಾಂಛನ (ಲೋಗೊ) ಸಂಪೂರ್ಣ ಇಂಗ್ಲಿಷ್ ಭಾಷೆಯಲ್ಲಿದೆ. ಹಿಂದೆ ಈ ಬಗ್ಗೆ ಸೂಚನೆ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪತ್ರದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.