ಬೆಂಗಳೂರು: ಬಸವ ಜಯಂತಿಯನ್ನು ನಗರದ ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಯಿತು. ವಿಧಾನಸಭೆ ಚುನಾವಣಾ ಪ್ರಚಾರದಲ್ಲಿರುವ ಅಭ್ಯರ್ಥಿಗಳು ಬಸವ ಜಯಂತಿಯಲ್ಲಿ ಭಾಗವಹಿಸಿ ಮತ ಸೆಳೆಯುವ ಪ್ರಯತ್ನ ಮಾಡಿದರು.

ಬಸವ ಜಯಂತಿ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮೆರವಣಿಗೆಗೆ ಅವಕಾಶ ನೀಡಿರಲಿಲ್ಲ. ರಸ್ತೆ ಬದಿಯಲ್ಲಿ, ಉದ್ಯಾನಗಳಲ್ಲಿರುವ ಬಸವೇಶ್ವರರ ಪುತ್ಥಳಿಗಳಿಗೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು.

ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಆಯೋಜನೆಗೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆ ಬಳಿ ಬಸವೇಶ್ವರರ ಪುತ್ಥಳಿಗೆ ಸಚಿವ ಕೆ.ಗೋಪಾಲಯ್ಯ ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ‘ಸಮಾಜದ ಮೌಢ್ಯತೆ ಕಿತ್ತೊಗೆಯಲು ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಬಸವಣ್ಣ ಮಾಡಿದ್ದರು. ಅವರ ತತ್ವಗಳನ್ನು ಎಲ್ಲರು ಅಳವಡಿಸಿಕೊಳ್ಳೋಣ’ ಎಂದರು.

ಬಸವೇಶ್ವನಗರದ ನೇತಾಜಿ ಸುಭಾಶ್ ಚಂದ್ರಬೋಸ್ ಕ್ರೀಡಾಂಗಣದಲ್ಲಿ ಬಸವೇಶ್ವರರ ಪ್ರತಿಮೆಗೆ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪುಟ್ಚಣ್ಣ ಪುಷ್ಪ ನಮನ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.