ಬೆಂಗಳೂರು: ಮತ ಪಟ್ಟಿಯಲ್ಲಿ ಹೆಸರಿರುವವರಿಗೆ ಮತದಾನದ 10 ದಿನದ ಮುಂಚಿತವಾಗಿಯೇ ಮತಚೀಟಿಯನ್ನು ಅವರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

‘ವೋಟರ್ ಹೆಲ್ಪ್ ಲೈನ್’ ತಂತ್ರಾಂಶವನ್ನು ಡೌನ್ಲೋಡ್ ಮಾಡಿಕೊಂಡು ಅದರ ಮೂಲಕ ಮತದಾನ ಮಾಡುವ ಮತಗಟ್ಟೆಯ ಮಾಹಿತಿ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದರು.

ಸ್ವೀಪ್ ಕಾರ್ಯಕ್ರಮದಡಿ ಒಆರ್ಆರ್ಸಿಎ ಸಹಯೋಗದೊಂದಿಗೆ ಮಾನ್ಯತಾ ಬಿಸಿನೆಸ್ ಪಾರ್ಕ್ನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಯಶಸ್ಸು ಎಂದರೆ ಚುನಾವಣೆಯಲ್ಲಿ ಗರಿಷ್ಠ ಮತದಾನ. ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ ಮತದಾನ ಜಾಗೃತಿ ಮೂಡಿಸಬೇಕು. ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳಬೇಕು. ಮೇ 10ರಂದು ಮತದಾನ ನಡೆಯಲಿದೆ. ಆ ದಿನ ಮತದಾನ ಮಾಡುವ ಉದ್ದೇಶಕ್ಕಾಗಿ ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ರಜೆ ನೀಡಲಾಗುತ್ತದೆ. ಎಲ್ಲರೂ ಮತದಾನ ಮಾಡಬೇಕೆಂಬ ಉದ್ದೇಶದಿಂದ ರಜೆಯನ್ನು ನೀಡಲಾಗುತ್ತದೆ. ಆದರೆ, ಅದನ್ನು ಸಾಕಷ್ಟು ಮಂದಿ ದುರುಪಯೋಗ
ಪಡಿಸಿಕೊಳ್ಳುತ್ತಾರೆ ಎಂದರು.

‘ನಮ್ಮ ಬೆಂಗಳೂರು ಐಕಾನ್’ ರಂಜನಿ ರಾಮಾನುಜಂ ಮಾತನಾಡಿ, ‘ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸೋಣ. ಎಲ್ಲರೂ ತಪ್ಪದೆ ಮತದಾನ ಮಾಡಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸೋಣ. ಇದು ನಮ್ಮೆಲ್ಲ
ಜವಾಬ್ದಾರಿಯಾಗಿದೆ’ ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ವಲಯ ಆಯುಕ್ತ ಪಿ.ಎನ್. ರವೀಂದ್ರ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಜಂಟಿ ಆಯುಕ್ತೆ ಪಲ್ಲವಿ, ಮತದಾನ ಜಾಗೃತಿ ಮೂಡಿಸುವ ‘ನಮ್ಮ ಬೆಂಗಳೂರು ಐಕಾನ್’ ಮಾಸ್ಟರ್ ಆನಂದ್, ಮೋಹನ್ ಕುಮಾರ್ ಇದ್ದರು.

ಜಾಗೃತಿ ಜಾಥಾ: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸಿದ್ದಯ್ಯ ಪುರಾಣಿಕ್ ರಸ್ತೆ, ಬಸವೇಶ್ವರನಗರದಲ್ಲಿರುವ ಸರ್ಕಾರಿ ಹೊಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಾ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.