ಬೆಂಗಳೂರು: ಖ್ಯಾತ ನಟ ದಿವಂಗತ ಅಂಬರೀಷ್ ಅವರ ಹೆಸರನ್ನು ನಗರದ ರೇಸ್ಕೋರ್ಸ್ ರಸ್ತೆಗೆ ಇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಬಾ.ಮ. ಹರೀಶ್ ಅವರ ನೇತೃತ್ವದ ನಿಯೋಗವು ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಸಲ್ಲಿಸಿದೆ.

ಕನ್ನಡ ಚಿತ್ರರಂಗದ ಸಾಧಕರಾದ ಡಾ.ರಾಜ್ಕುಮಾರ್, ಪಾರ್ವತಮ್ಮ ರಾಜ್ಕುಮಾರ್, ವಿಷ್ಣುವರ್ಧನ್ ಮತ್ತು ಪುನೀತ್ ರಾಜ್ಕುಮಾರ್ ಅವರ ಹೆಸರುಗಳನ್ನು ನಗರದ ಪ್ರಮುಖ ರಸ್ತೆಗಳಿಗೆ ಇರಿಸಲಾಗಿದೆ. ಅದಕ್ಕೆ ಕೃತಜ್ಞತೆ ಸಲ್ಲಿಸಿರುವ ನಿಯೋಗವು, ಅಂಬರೀಶ್ ಅವರಿಗೆ 70 ವರ್ಷಗಳು ಆದ ಸಂದರ್ಭದಲ್ಲಿ ಅವರ ಹೆಸರನ್ನು ರಾಮ್ ನಾರಾಯಣ ಚಲರಾಮ್ ಕಾಲೇಜ್ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕು ಎಂದು ಮನವಿ ಮಾಡಿದೆ. ಈ ಮನವಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಲಾಗಿದೆ ಎಂದು ಬಾ.ಮ. ಹರೀಶ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.