ಬೆಂಗಳೂರು: ‘ಅನ್ಯ ಧರ್ಮದ ಯುವಕನನ್ನು ಪ್ರೀತಿಸಿ ಮದುವೆಯಾಗಲು ಮುಂದಾದ ಕಾರಣ ಪಾಲಕರು ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ’ ಎಂದು ಆರೋಪಿಸಿದ್ದ ಯುವತಿಗೆ ಹೈಕೋರ್ಟ್ ಆಕೆ ತನಗೆ ಇಷ್ಟವಾದ ಜಾಗದಲ್ಲಿ ನೆಲೆಸಲು ಅವಕಾಶ ಕಲ್ಪಿಸಿದೆ.

ದಕ್ಷಿಣ ಕನ್ನಡದ ಹಿಂದೂ ಯುವತಿಯೊಬ್ಬಳನ್ನು ಆಕೆಯ ಪಾಲಕರು ಅಕ್ರಮ ಬಂಧನದಲ್ಲಿಟ್ಟಿದ್ದಾರೆ ಎಂದು ಆರೋಪಿಸಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಯುವಕ ಹೈಕೋರ್ಟ್ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಇದೇ 11ರಂದು ವಿಚಾರಣೆ ನಡೆಸಿದ್ದ ರಜಾಕಾಲದ ನ್ಯಾಯಪೀಠವು ಯುವತಿ ಇದೇ 16ರವರೆಗೆ ಪುನರ್ವಸತಿ ಕೇಂದ್ರದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿತ್ತು.

ಮೇ 16ರಂದು ಅರ್ಜಿ ಪುನಃ ವಿಚಾರಣೆಗೆ ಬಂದಾಗ ಯುವತಿ ಕೋರ್ಟ್ಗೆ ಖುದ್ದು ಹಾಜರಾಗಿ, ‘ನನಗೀಗ 24 ವರ್ಷ. ನಾನು ವಯಸ್ಕಳಾಗಿದ್ದು, ಉದ್ಯೋಗ ನಿರ್ವಹಿಸುತ್ತಿದ್ದೇನೆ. ನನಗೆ ಪಾಲಕರೊಂದಿಗೆ ಹೋಗಲು ಇಷ್ಟವಿಲ್ಲ. ಸದ್ಯ ತಂಗಿರುವ ಪುನರ್ವಸತಿ ಕೇಂದ್ರದಲ್ಲಿ ಉಳಿಯಲೂ ಇಚ್ಛೆಯಿಲ್ಲ. ನಾನು ಇಷ್ಟಪಡುವ ಪಿಜಿಯಲ್ಲಿ ನೆಲೆಸಲು ಬಯಸುತ್ತಿದ್ದೇನೆ. ಅದಕ್ಕೆ ಅವಕಾಶ ಮಾಡಿಕೊಡಬೇಕು. ನಾನು ಉಳಿದುಕೊಳ್ಳುವ ಪಿಜಿಯ ವಿಳಾಸ ಬಹಿರಂಗಪಡಿಸುವುದಿಲ್ಲ. ನನಗೆ ಯಾವುದೇ ಪೊಲೀಸ್ ರಕ್ಷಣೆಯೂ ಬೇಡ‘ ಎಂದು ತಿಳಿಸಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳಾದ ಎಚ್.ಟಿ. ನರೇಂದ್ರ ಪ್ರಸಾದ್ ಮತ್ತು ಎಸ್.ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠ, ಯುವತಿ ತಾನು ಬಯಸಿದ ಜಾಗದಲ್ಲಿ ನೆಲೆಸಲು ಅನುಮತಿ ನೀಡಿತು.

‘ಒಂದೊಮ್ಮೆ ಯುವತಿಗೆ ಯಾವುದೇ ಸಮಸ್ಯೆ ಎದುರಾದರೂ ಹತ್ತಿರದ ಪೊಲೀಸ್ ಠಾಣೆಯ ಮೊರೆ ಹೋಗಬಹುದು. ಸಂಬಂಧಿಸಿದ ಪೊಲೀಸರು ಯುವತಿಗೆ ಸೂಕ್ತ ನೆರವು ಕಲ್ಪಿಸಬೇಕು" ಎಂದು ನಿರ್ದೇಶಿಸಿತು.

ಇದೇ ವೇಳೆ ಯುವತಿಯ ತಂದೆ ಪರ ವಕೀಲರು, ಅರ್ಜಿದಾರ ಯುವಕನೊಂದಿಗೆ ಚರ್ಚಿಸಿ (ಯುವತಿ ತಂದೆ) ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಮನವಿಯನ್ನೂ ಪುರಸ್ಕರಿಸಿದ ನ್ಯಾಯಪೀಠ, ಇದೇ 22ರವರೆಗೆ ಸಮಯಾವಕಾಶ ಕಲ್ಪಿಸಿ ವಿಚಾರಣೆ ಮುಂದೂಡಿತು. ಅಂದು ಯುವತಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದೂ ನಿರ್ದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.