ಬೆಂಗಳೂರು: ‘ಕೋವಿಡ್‌ನಿಂದಾಗಿ ಬಿಸಿಯೂಟ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಏಪ್ರಿಲ್‌ನಿಂದಲೇ ವೇತನ ಬಿಡುಗಡೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಇಲ್ಲಿ ಮಾತನಾಡಿದ ಸಂಘದ ಗೌರವ ಅಧ್ಯಕ್ಷೆ ಎಸ್.ವರಲಕ್ಷ್ಮಿ‘ಕೇಂದ್ರ ಸರ್ಕಾರವು ಬಿಸಿಯೂಟ ಸಿಬ್ಬಂದಿಗೆ 10 ವರ್ಷಗಳಿಂದ ವೇತನ ಹೆಚ್ಚಿಸಿಲ್ಲ. ಕೋವಿಡ್ ಸಮಯದಲ್ಲಿ ರಾಜ್ಯ ಸರ್ಕಾರವು ಪ್ರಕಟಿಸಿದ ಆರ್ಥಿಕ ಪ್ಯಾಕೇಜ್‌ಗಳಿಂದಲೂ ನಮ್ಮನ್ನು ಹೊರಗಿಡಲಾಗಿದೆ. ಪ್ರತಿವರ್ಷ ನಮಗೆ ಜೂನ್‌ನಿಂದ ವೇತನ ನೀಡಬೇಕು. ಈಗ ಮೂರು ತಿಂಗಳಾದರೂ ಸಂಬಳ ಕೈಸೇರಿಲ್ಲ. ಬಾಕಿ ಉಳಿಸಿಕೊಂಡಿರುವ ಈ ಮೊತ್ತದ ಜೊತೆಗೆ ಏಪ್ರಿಲ್ ಮತ್ತು ಮೇ ತಿಂಗಳ ವೇತನವನ್ನೂ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.

‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಬಲಪಡಿಸುವುದರ ಜೊತೆಗೆ ಈಗಿರುವ ಮಾದರಿಯನ್ನೇ ಮುಂದುವರಿಸಬೇಕು.’ ಎಂದರು. ‘ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿಯನ್ನು ಜಾರಿಗೊಳಿಸಬಾರದು.’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.