ಬೆಂಗಳೂರು: ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ದತ್ತು ಮಗ ಸುಧಾಕರನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾದರು.

ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎಐಎಡಿಎಂಕೆ ಪಕ್ಷದ ಪ್ರಮುಖರಾದ ವಿ.ಕೆ. ಶಶಿಕಲಾ ನಟರಾಜನ್ ಜ. 27ರಂದು ಬಿಡುಗಡೆ ಆಗಿದ್ದರು. ದಂಡ ಪಾವತಿ ವಿಳಂಬ ಹಾಗೂ ಕೆಲ ಕಾನೂನು ಪ್ರಕ್ರಿಯೆಗಳು ಬಾಕಿ ಇದ್ದಿದ್ದರಿಂದ ಸುಧಾಕರನ್ ಬಿಡುಗಡೆ ಆಗಿರಲಿಲ್ಲ.

ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರಿಂದ ಸುಧಾಕರನ್ ಅವರನ್ನು ಶುಕ್ರವಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಜೈಲು ಬಳಿ ಬಂದಿದ್ದ ಅವರ ಕುಟುಂಬದವರು ಹಾಗೂ ಬೆಂಬಲಿಗರು, ಹೂ ಮಾಲೆ ಹಾಕಿ ಸ್ವಾಗತಿಸಿದರು. ನಂತರ, ಎಲ್ಲರೂ ತಮಿಳುನಾಡಿನತ್ತ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.