ಬೆಂಗಳೂರು: ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ. ರೆಡ್ಡಿ ಅವರ ಮಾದರಿ ಪ್ರತಿಮೆ ಬದಲಾಯಿಸಿ ಶಾಶ್ವತವಾಗಿ ಉಳಿಯುವ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಮೆಯ ಮಾದರಿಗಳನ್ನು ತರಿಸಿಕೊಂಡು ಸೂಕ್ಷ್ಮವಾಗಿ ಅಧ್ಯಯನ ಮಾಡಿ, ನೈಜ ಪ್ರತಿಮೆಯನ್ನು ಸ್ಥಾಪಿಸಬೇಕು. ನುರಿತ ಹಾಗೂ ಪರಿಣಿತರ ಸಹಕಾರದೊಂದಿಗೆ ಈ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದರು.

ಕೆ.ಸಿ. ರೆಡ್ಡಿ ಯವರ ಕೊಡುಗೆ ಅಪಾರವಾಗಿದೆ. ಅವರ ಪ್ರತಿಮೆಯು ಶಾಶ್ವತವಾಗಿರುವಂತೆ ಸ್ಥಾಪಿಸಲು ಕ್ರಮಕೈಗೊಳ್ಳಬೇಕು. ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು ಅನುಸರಣಾ ವರದಿಯೊಂದಿಗೆ ಮುಂದಿನ ಸಭೆಯಲ್ಲಿ ಮಂಡಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.