ಬೆಂಗಳೂರು: ಕೆಂಗೇರಿ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ಜ್ಯೋತಿಷಿ ಪ್ರಮೋದ್ ಎಂಬುವರ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳ ತಂಡ, ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದೆ.

‘ಜ್ಯೋತಿಷ್ಯ ಕೇಳುವ ನೆಪದಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮನೆಗೆ ಬಂದಿದ್ದ ಮೂವರು ದುಷ್ಕರ್ಮಿಗಳು, ಪ್ರಮೋದ್ ಮೇಲೆ ಹಲ್ಲೆ ಮಾಡಿದ್ದರು. ನಂತರ, 400 ಗ್ರಾಂ ಚಿನ್ನಾಭರಣ ಹಾಗೂ ₹ 5 ಲಕ್ಷ ನಗದು ದೋಚಿಕೊಂಡು ಹೋಗಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

‘ದುಷ್ಕರ್ಮಿಗಳ ಹಲ್ಲೆಯಿಂದಾಗಿ ಪ್ರಮೋದ್ ಮುಖಕ್ಕೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅವರು ನೀಡಿರುವ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದೂ ಹೇಳಿದರು.

‘ಪ್ರಮೋದ್ ಅವರು ಒಂಟಿಯಾಗಿ ಮನೆಯಲ್ಲಿ ವಾಸವಿದ್ದರು. ಈ ಬಗ್ಗೆ ತಿಳಿದಿದ್ದವರೇ ಜ್ಯೋತಿಷ್ಯ ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಕೃತ್ಯ ಎಸಗಿರುವ ಅನುಮಾನವಿದೆ. ಮನೆ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.