ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯಿಂದ (ಕೆಎಚ್‌ಬಿ) ನಗರದ ಕೆಂಗೇರೆ ಹೋಬಳಿಯ ವಲಗೇರಹಳ್ಳಿಯಲ್ಲಿ ₹150 ಕೋಟಿ ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ಮತ್ತು ಮಲ್ಟಿಫ್ಲೆಕ್ಸ್ ನಿರ್ಮಿಸುವ ಕಾಮಗಾರಿಯ ಅಂದಾಜು ಪಟ್ಟಿಗೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

‘ವಲಗೇರಹಳ್ಳಿಯ ಸರ್ವೆ ನಂಬರ್ 20/8ರಲ್ಲಿ ಕೆಎಚ್‌ಬಿ ವಾಣಿಜ್ಯ ಸಂಕೀರ್ಣ ಮತ್ತು ಮಲ್ಟಿಫ್ಲೆಕ್ಸ್ ನಿರ್ಮಿಸಲಿದೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದರು.

ವೆಚ್ಚ ಹೆಚ್ಚಳಕ್ಕೆ ಒಪ್ಪಿಗೆ: ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಹೋಪ್ ಫಾರ್ಮ್‌ವರೆಗಿನದ ಸಿಗ್ನಲ್ ರಹಿತ ಕಾರಿಡಾರ್ ನಿರ್ಮಾಣ ಮತ್ತು ನಿರ್ವಹಣೆ ಕಾಮಗಾರಿಯ ವೆಚ್ಚವನ್ನು ₹ 13.12 ಕೋಟಿಯಷ್ಟು ಹೆಚ್ಚಳ ಮಾಡುವ ಪ್ರಸ್ತಾವಕ್ಕೂ ಸಂಪುಟ ಒಪ್ಪಿಗೆ ಸೂಚಿಸಿದೆ.

‘ಈ ಮೊದಲು ₹ 150 ಕೋಟಿ ವೆಚ್ಚದ ಕಾಮಗಾರಿಗೆ ಒಪ್ಪಿಗೆ ನೀಡಲಾಗಿತ್ತು. ಗುಂಡಿ ಮುಚ್ಚುವುದು ಸೇರಿದಂತೆ ಕೆಲವು ಅಂಶಗಳು ಅಂದಾಜು ಪಟ್ಟಿಯಲ್ಲಿರಲಿಲ್ಲ ಎಂಬ ಕಾರಣದಿಂದ ಅದನ್ನು ₹ 163.12 ಕೋಟಿಗೆ ಹೆಚ್ಚಳ ಮಾಡುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ’ ಎಂದು ಸಚಿವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.