ಬೆಂಗಳೂರು: ಪೀಣ್ಯದ ಸುವರ್ಣ ನಗರ ಬಸ್ ನಿಲ್ದಾಣದ ಬಳಿ ಶನಿವಾರ ರಾತ್ರಿ ಮಹಿಳೆಯೊಬ್ಬರನ್ನು ಅಪಹರಿಸಿರುವ ಘಟನೆ ನಡೆದಿದೆ.

ಮಹಿಳೆ ಅಪಹರಣ ದೃಶ್ಯ ನೋಡಿರುವ ಸತ್ಯಜಿತ್ ಚೌಧರಿ ಎಂಬುವರು ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

‘ನನ್ನ ತಾಯಿ ಜತೆ ಫೋನ್ನಲ್ಲಿ ಮಾತನಾಡುತ್ತಾ ನಿಂತಿದ್ದೆ. ಈ ವೇಳೆ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದ ಅಪರಿಚಿತರು ಮೊಬೈಲ್ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಟಗಟ್ಟಿದರು. ಅವರಲ್ಲಿ ಕಪ್ಪು ಬಣ್ಣದ ಜಾಕೆಟ್ ಧರಿಸಿದ ವ್ಯಕ್ತಿಯೊಬ್ಬ ಮಹಿಳೆಯ ಮುಖವನ್ನು ಬಟ್ಟೆಯಿಂದ ಮುಚ್ಚಿದ. ನಂತರ ಆರು ಜನ ಅವರನ್ನು ಎತ್ತಿಕೊಂಡು ಕಾರಿನ ಎಡಭಾಗದ ಬಾಗಿಲು ತೆಗೆದು ಒಳಗೆ ಹಾಕಿಕೊಂಡು ಪರಾರಿ ಆಗಿದ್ದಾರೆ’ ಎಂದು ಸತ್ಯಜಿತ್ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.