ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ತೇಜಸ್ವಿನಿ ಬಿ. ಅವರನ್ನು ನೇಮಿಸಲಾಗಿದೆ.

ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇವರು ಸಂಸ್ಥೆಯ ರೇಡಿಯೇಷನ್ ಆಂಕಾಲಜಿ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಈ ಹಿಂದಿನ ನಿರ್ದೇಶಕ ಡಾ.ವಿ.ಲೋಕೇಶ್ ಅವರ ವಿರುದ್ಧ ಅಧಿಕಾರ ದುರ್ಬಳಕೆ, ಅಕ್ರಮ ಸೇವಾ ಬಡ್ತಿ, ವೈದ್ಯಕೀಯ ನಿರ್ಲಕ್ಷ್ಯ ಸೇರಿ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಇಲಾಖಾ ವಿಚಾರಣೆ ನಡೆಯುತ್ತಿದೆ. ಇದೇ ಕಾರಣದಿಂದ ಅವರನ್ನು ಅಮಾನತು ಮಾಡಲಾಗಿದೆ. ಇದರಿಂದಾಗಿ ಸಂಸ್ಥೆಯ ನಿರ್ದೇಶಕ ಹುದ್ದೆ ಹಲವು ದಿನಗಳಿಂದ ಖಾಲಿಯಿತ್ತು.

ಸಂಸ್ಥೆಯ ಆಡಳಿತ ಸುಧಾರಣೆ ಹಾಗೂ ಚಟುವಟಿಕೆಗಳ ನಿರ್ವಹಣೆಗೆ ಐಎಎಸ್ ಅಧಿಕಾರಿ ಎನ್. ಮಂಜುಶ್ರೀ ಅವರನ್ನು ಆಡಳಿತಾಧಿಕಾರಿಯನ್ನಾಗಿ ಫೆಬ್ರುವರಿಯಲ್ಲಿ ನೇಮಕ ಮಾಡಲಾಗಿತ್ತು. ಆರು ತಿಂಗಳ ಅವಧಿ ಮುಕ್ತಾಯವಾಗಿದ್ದರಿಂದ ವೈದ್ಯಕೀಯ ಶಿಕ್ಷಣ ಇಲಾಖೆಯು ಆಡಳಿತಾಧಿಕಾರಿಯ ಕಾರ್ಯಾವಧಿ ವಿಸ್ತರಿಸುವಂತೆ ಸರ್ಕಾರವನ್ನು ಕೋರಿತ್ತು. ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ಎಚ್ಎಂ) ನಿರ್ದೇಶಕ ನವೀನ್ ಭಟ್ ಅವರನ್ನು ಸಂಸ್ಥೆಗೆ ನೂತನ ಆಡಳಿತಾಧಿಕಾರಿಯನ್ನಾಗಿ ಕಳೆದ ತಿಂಗಳು ನೇಮಿಸಲಾಗಿತ್ತು.

ಸಂಸ್ಥೆಯ ಆಡಳಿತದ ದೃಷ್ಟಿಯಿಂದ ಈಗ ಪ್ರಭಾರ ನಿರ್ದೇಶಕರನ್ನಾಗಿ ತೇಜಸ್ವಿನಿ ಅವರನ್ನು ನೇಮಿಸಿದ್ದು, ಇದು ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯಲ್ಲಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.